ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಕುರಿತು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ.
03:06 PM Jan 18, 2024 IST
|
prashanth
ಬೆಂಗಳೂರು,ಜನವರಿ,18,2024(www.justkannada.in): ನ್ಯಾ. ಸದಾಶಿವ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ಸುದೀರ್ಘ ಚರ್ಚೆ ನಡೆದಿದ್ದು , ನ್ಯಾ. ಸದಾಶಿವ ಆಯೋಗ ವರದಿ ಜಾರಿಗೆ ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ.
ಹೊಸ ಜನಗಣತಿ ಪ್ರಕಾರ ಮೀಸಲಾತಿ ಪರಿಷ್ಕರಿಸಲು ಸಂವಿಧಾನಬದ್ಧವಾಗಿ ರಾಜ್ಯಕ್ಕೆ ಅಧಿಕಾರ ಕೊಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: Government- decision - recommend - Center - reservation - Scheduled Castes.
Next Article