HomeBreaking NewsLatest NewsPoliticsSportsCrimeCinema

ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು : ಸಿಇಟಿ ಪ್ರಶ್ನೆ ಪತ್ರಿಕೆ ಲೋಪ, ಪರಿಶೀಲನೆಗೆ ತಜ್ಞರ ಸಮಿತಿ ರಚಿಸಿದ ಸರಕಾರ.!

05:23 PM Apr 23, 2024 IST | mahesh

ಬೆಂಗಳೂರು, ಏಪ್ರಿಲ್ 22, 2024 : (www.justkannada.in news ) ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (CET) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)  ನಡೆಸಿದ ಪರೀಕ್ಷೆಯಲ್ಲಿನ ಲೋಪದೋಷಗಳ ಬಗ್ಗೆ ಸೂಕ್ತ ಪರಿಶೀಲನೆ ನಡೆಸಿ ವರದಿ ನೀಡಲು ರಾಜ್ಯ ಸರಕಾರ ತಜ್ಞರ ಸಮಿತಿ ರಚಿಸಿದೆ.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)  ಏ. 18 ಮತ್ತು 19 ರಂದು ನಡೆಸಿತ್ತು.  ಸಿಇಟಿ ಪರೀಕ್ಷೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳಿಗೆ ನಡೆಸಲಾಯಿತು. ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ ಪ್ರಶ್ನೆ ಪತ್ರಿಕೆಗಳಲ್ಲಿ ಲೋಪ ಕಂಡು ಬಂದಿದ್ದು ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಅಧಿಕಾರಿಗಳ ತಪ್ಪಿಗೆ ಶಿಕ್ಷೆ ಅನುಭವಿಸುವ ಭಯ ಮಕ್ಕಳನ್ನು ಕಾಡುತ್ತಿದೆ.

ಪತ್ರಿಕೆಗಳ ಹಲವಾರು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿತ್ತು. ಅನೇಕ ಪ್ರಶ್ನೆಗಳು ಪಠ್ಯಕ್ರಮದ ಹೊರತಾಗಿರುವ ಕಾರಣ ಇದು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಆದುದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯಿಸಲಾಗಿತ್ತು.

ಪ್ರಶ್ನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಕೆಇಎಯು ವಿದ್ಯಾರ್ಥಿಗಳಿಗೆ ಏ.  27 ರವರೆಗೆ ಅವಕಾಶ ನೀಡಿದೆ. ಈ ಸಂಬಂಧ ಸರ್ಕಾರಕ್ಕೆ ವಿಸ್ತ್ರುತ ವರದಿ ಸಲ್ಲಿಸುವಂತೆ 'ಕೆಇಎ' ಗೆ ಸೂಚಿಸಲಾಗಿದೆ.

ಏತನ್ಮಧ್ಯೆ, ಈ ಪ್ರಕರಣದ ಬಗ್ಗೆ ಸರ್ಕಾರವು ಪರಿಶೀಲನೆ ನಡೆಸಿದೆ ಮತ್ತು ಸಿಇಟಿಯ ಪಠ್ಯಕ್ರಮದಿಂದ ಹೊರತಾಗಿರುವ ಪ್ರಶ್ನೆಗಳ ಸಂಖ್ಯೆಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿಯನ್ನು ರಚಿಸಿದೆ. ತಜ್ಞರ ಸಮಿತಿಯು ತನ್ನ ವರದಿಯನ್ನು ತಕ್ಷಣವೇ ನೀಡುವಂತೆ ಆದೇಶಿಸಲಾಗಿದೆ.

ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 'ಕೆಇಎ'ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಈ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

key words: Government sets up, Expert Committee, to examine, out of syllabus questions, in CET 2024

 

English summary: 

The Karnataka Common Entrance Test (CET) was conducted by the Karnataka Examination Authority (KEA) on 18th and 19th April 2024. The CET Exam was conducted for 4 subjects (Physics, Chemistry, Mathematics and Biology). More than 3 lakhs students appeared in the exam across the State.

Pursuant to the exams, news reports have mentioned that a number of questions from the papers were allegedly out of syllabus of CET. Representations have also been received that many questions were not from the syllabus and that this has affected the students. Demands for providing grace marks or re - conducting the exam have also been made. The KEA has given students an opportunity to raise objections to the questions upto the 27th of April. The KEA has been asked to submit a detailed report in this regard to the Government.

In the meantime, the matter has been examined by the government and a committee of experts for each of the 4 subjects has been set up by government to ascertain the number of questions that are out of the syllabus of CET. The expert committee has been mandated to provide its report immediately.

KEA will act in the interests of the students who have appeared for the CET exam. Based on the report of the expert committee, a further decision will be taken in this regard. The interests of the students will be utmost priority and no hardship will be caused to the students.

 

Tags :
Expert CommitteeGovernment sets upin CET 2024out of syllabus questionsto examine
Next Article