HomeBreaking NewsLatest NewsPoliticsSportsCrimeCinema

ರಾಜ್ಯಪಾಲರು ಕೇಂದ್ರಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು : ಸಿಎಂ ಸಿದ್ದರಾಮಯ್ಯ 

06:31 PM Aug 20, 2024 IST | prashanth

ಬೆಂಗಳೂರು, ಆಗಸ್ಟ್ 20,2024 (www.justkannada.in):  ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯವೆಸಗಿದ್ದು, ಅವರು ಭಾರತದ ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಮೇಲಿನ ತನಿಖೆಗಾಗಿ ರಾಜ್ಯಪಾಲರು ಅನುಮತಿ ನೀಡಲು ಲೋಕಾಯುಕ್ತದವರು ಮನವಿ ಮಾಡಿರುವ ಬಗ್ಗೆ ಮಾಧ್ಯಮದವರಿಗೆ ತಮ್ಮ ಪ್ರತಿಕ್ರಿಯೆ ನೀಡಿದರು.

ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ನಲ್ಲಿ ನಡೆದ ಗಣಿಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಲೋಕಾಯುಕ್ತದವರು 23-11-2023 ರಂದು ಅನುಮತಿ ಕೋರಿದ್ದು, ಆ ಬಗ್ಗೆ ರಾಜ್ಯಪಾಲರು ಯಾವುದೇ ನಿರ್ಣಯ ಕೈಗೊಳ್ಳದ ಕಾರಣ ,ಲೋಕಾಯುಕ್ತ ಮತ್ತೊಮ್ಮೆ ಕೋರಿದ್ದಾರೆ.  ಆದರೆ 26-07-2024 ರಂದು ಅಬ್ರಾಹಂ ರವರು ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ  ಅನುಮತಿ ಕೋರಿದ ತಕ್ಷಣ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ  ನೀಡಿದ್ದು, ಇಂತಹ ತಾರತಮ್ಯವೇಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ರಾಜ್ಯಪಾಲರನ್ನು ಮೂದಲಿಸಲಾಗಿದೆ ಎಂದು ಬಿಜೆಪಿಯವರು ಕಾಂಗ್ರೆಸ್ ನವರ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಶಶಿಕಲಾ ಜೊಲ್ಲೆ , ಹೆಚ್.ಡಿ. ಕುಮಾರಸ್ವಾಮಿ , ಮುರುಗೇಶ್ ನಿರಾಣಿ, ಜನಾರ್ಧನ ರೆಡ್ಡಿನವರ ಮೇಲಿರುವ ಆರೋಪಗಳಿದ್ದು, ಇದುವರೆಗೆ ತನಿಖೆಗೆ ಆದೇಶಿಸಿರುವುದಿಲ್ಲ. ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾಗಿದ್ದು, ಅವರ ಮೇಲೆ ಗೌರವವಿದೆ. ಆದರೆ ರಾಜ್ಯಪಾಲರು ತಾರತಮ್ಯ ಧೋರಣೆ ಅನುಸರಿಸಬಾರದು ಎಂದರು.

Key words: Governor, not work , central government, representative, CM Siddaramaiah

Tags :
central government.CM SiddaramaiahGovernorNot workRepresentative
Next Article