For the best experience, open
https://m.justkannada.in
on your mobile browser.

ರಾಜ್ಯಪಾಲರು ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ- ಸಿಎಂ ಸಿದ್ದರಾಮಯ್ಯ ಕಿಡಿ

01:46 PM Aug 02, 2024 IST | prashanth
ರಾಜ್ಯಪಾಲರು ಜೆಡಿಎಸ್  ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ  ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು,ಆಗಸ್ಟ್,2,2024 (www.justkannada.in): ರಾಜ್ಯಪಾಲರು ಶೋಕಾಸ್ ನೀಡಿರುವ ವಿಚಾರ ಕುರಿತು  ರಾಜ್ಯಪಾಲರ ನಡೆ ವಿರುದ್ಧ ಗರಂ ಆದ ಸಿಎಂ ಸಿದ್ದರಾಮಯ್ಯ,  ರಾಜ್ಯಪಾಲರು ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ. ಇದಕ್ಕೆಲ್ಲ ನಾನು ಹೆದರಲ್ಲ, ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌ ಎಂದರು.

ಇಂದು ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ. ಜೆಡಿಎಸ್, ಬಿಜೆಪಿ ಕೈಗೊಂಬೆಯಾಗಿ ವರ್ತಿಸಿದ್ದಾರೆ. 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರೋನು. ಆದರೆ ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರ ಗೊಳಿಸೋದಕ್ಕೆ ಯತ್ನಿಸಿದ್ದಾರೆ. ರಾಜ್ಯಪಾಲರಿಗೆ ಸಲಹೆ ನೀಡುವವರು ಯಾರು. ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರ ನೋಟಿಸ್ ಗೆ ನಾನ್ಯಾಕೆ ಹೆದರಲಿ. ಅಶೋಕ್ ಹೆದರಿರಬೇಕು, ಅವರಿಗೆ ಭಯ, ನನಗಲ್ಲ ಎಂದು ಗುಡುಗಿದರು.

ಟಿ.ಜೆ.ಅಹ್ರಾಂ ಒಬ್ಬ ಬ್ಲಾಕ್ ಮೇಲರ್.

ಟಿ.ಜೆ.ಅಹ್ರಾಂ ಒಬ್ಬ ಬ್ಲಾಕ್ ಮೇಲರ್. ಜುಲೈ 26 ಕ್ಕೆ ಬೆಳಿಗ್ಗೆ 11:30 ಕ್ಕೆ ದೂರು ಕೊಡ್ತಾನೆ, ಆ ದೂರಿನ ಪರಾಮರ್ಶೆ ಮಾಡದೇ ಆ ದಿನ ಸಂಜೆಯೇ ಶೋಕಾಸ್ ನೋಟಿಸ್ ರೆಡಿ ಇದೆ ಬಂದು ಪಡೆದುಕೊಳ್ಳಿ ಅಂತಾ ನಮ್ಮ ಅಧಿಕಾರಿ ಎಲ್‌ ಕೆ ಅತೀಕ್ ಗೆ ಹೇಳ್ತಾರೆ. ಜೊಲ್ಲೆ, ಮುರುಗೇಶ್ ನಿರಾಣಿ, ಜರ್ನಾರ್ಧನ ರೆಡ್ಡಿ ವಿರುದ್ಧದ ದೂರು ಇನ್ನೂ ಹಾಗೆಯೇ ಇವೆ. ಅವರಿಗೆ ಶೋಕಾಸ್ ನೋಟಿಸ್ ಕೊಟ್ಟಿಲ್ಲ. ನನಗೆ ಯಾಕೆ ತರಾತುರಿಯಲ್ಲಿ ನೋಟಿಸ್ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

Key words: Governor, notice,JDS, BJP, CM Siddaramaiah

Tags :

.