ಭಾರತಕ್ಕೆ ಆಗಮಿಸಿದ ಕಂಚಿನ ಪದಕ ವಿಜೇತೆ ಮನು ಭಾಕರ್ ಗೆ ಅದ್ಧೂರಿ ಸ್ವಾಗತ
10:31 AM Aug 07, 2024 IST
|
prashanth
ನವದೆಹಲಿ,ಆಗಸ್ಟ್,7,2024 (www.justkannada.in) ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಎರಡು ಕಂಚಿನ ಪದಕ ಗೆದ್ದು ಭಾರತಕ್ಕೆ ಕೀರ್ತಿ ತಂದ ಮನು ಭಾಕರ್ ಇಂದು ಭಾರತಕ್ಕೆ ವಾಪಸ್ ಆಗಿದ್ದು ನವದೆಹಲಿಯಲ್ಲಿ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.
ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಮನು ಭಾಕರ್ ಅವರು ಶೂಟಿಂಗ್ ವಿಭಾಗದಲ್ಲಿ 2 ಕಂಚಿನ ಪದಕ ಗೆದ್ದಿದ್ದಾರೆ. ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.
ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಮನು ಒಲಿಂಪಿಕ್ ಪದಕ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ನಂತರ, ಅವರು ಸರಬ್ಜೋತ್ ಸಿಂಗ್ ಅವರೊಂದಿಗೆ ಮಿಶ್ರ ತಂಡ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದರು.
Key words: grand welcome,bronze medalist, Manu Bhakar
Next Article