For the best experience, open
https://m.justkannada.in
on your mobile browser.

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್.

06:30 PM Jun 08, 2024 IST | prashanth
ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ  ಗೃಹ ಸಚಿವ ಡಾ ಜಿ ಪರಮೇಶ್ವರ್

ಬೆಂಗಳೂರು, ಜೂನ್​, 8,2024 (www.justkannada.in):  ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್  ನಿರೀಕ್ಷಿತ ಸ್ಥಾನ ಗಳಿಸಿದ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆ ಮುಂದುವರೆಸಬೇಕೋ ಬೇಡವೋ ಎಂಬ ಬಗ್ಗೆ ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಾ.ಜಿ.ಪರಮೇಶ್ವರ್ ಅವರು, ಗ್ಯಾರಂಟಿ ಯೋಜನೆ ಜಾರಿಗೊಳಿಸಿರುವುದು  ರಾಜಕೀಯ ಉದ್ದೇಶಕ್ಕಲ್ಲ. ಬಡತನ ನಿರ್ಮೂಲನೆಗೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಹೀಗಾಗಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ  ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜಕೀಯ ದೃಷ್ಟಿಕೋನದಿಂದ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ ಗ್ಯಾರಂಟಿ ಯೋಜನೆ ಜಾರಿಯಿಂದ ಪಕ್ಷಕ್ಕೆ ಲಾಭವಾಗಬಹುದು ಎಂದು ತಿಳಿಸಿದರು.

ಇನ್ನು ನಾವು ಲೋಕಸಭೆ ಚುನಾವಣೆಯಲ್ಲಿ ಬಹಳಷ್ಟು ಕಡೆ ಸೋತಿದ್ದೇವೆ. ಸೋಲಿನ ಆತ್ಮಾವಲೋಕನ ಮಾಡಬೇಕಿದೆ. ಏಕೆ ಸೋತಿದ್ದೇವೆ, ಎಲ್ಲಿ ಎಡವಿದ್ದೇವೆ ಎಂಬ ಚರ್ಚೆ ಆಗಬೇಕಿದೆ  ಎಂದು ಪರಮೇಶ್ವರ್ ತಿಳಿಸಿದರು.

Key words: Guarantee, not , stop, G. Parameshwar

Tags :

.