ಶಾಮನೂರು ಶಿವಶಂಕರಪ್ಪ ವಿರುದ್ದ ವಾಗ್ದಾಳಿ: ಕಾಂತರಾಜು ವರದಿ ಸ್ವೀಕಾರಕ್ಕೆ ಹೆಚ್.ವಿಶ್ವನಾಥ್ ಆಗ್ರಹ.
11:51 AM Nov 25, 2023 IST
|
prashanth
ಬೆಂಗಳೂರು,ನವೆಂಬರ್,25,2023(www.justkannada.in): ಜಾತಿಗಣತಿ ವರದಿಗೆ ವಿರೋಧ ವ್ಯಕ್ತಪಡಿಸಿರುವ ಶಾಸಕ ಶಾಮನೂರು ಶಿವಶಂಕರಪ್ಪ ವಿರುದ್ದ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಹೆಚ್.ವಿಶ್ವನಾಥ್, ಶಾಮನೂರು ಶಿವಶಂಕರಪ್ಪಗೆ ಓದಲು ಬರುತ್ತಾ ಎಂದು ಕೇಳಿ. ಯಾರ ಮತಗಳಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ. ನಾಟಕ ಬೂಟಾಟಿಕೆಯನ್ನ ಯಾರು ಒಪ್ಪುವುದಿಲ್ಲ ಎಂದು ಕಿಡಿಕಾರಿದರು.
ಕಾಂತರಾಜ್ ವರದಿಯನ್ನ ಸರ್ಕಾರ ಸ್ವೀಕಾರ ಮಾಡಬೇಕು. ಸರ್ಕಾರ ವರದಿ ಸ್ವೀಕರಿಸಿ ಸಾರ್ವಜನಿಕ ಚರ್ಚೆಗೆ ಬಿಡಬೇಕು. ಸಿದ್ದರಾಮಯ್ಯ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಬಿಎಸ್ ವೈ ಹೆಚ್. ಡಿ ಕುಮಾರಸ್ವಾಮಿ ನಿರ್ಲಕ್ಷ್ಯ ಮಾಡಿದರು. ಬಿಜೆಪಿ ಜೆಡಿಎಸ್ ಸಾಮಾಜಿಕ ನ್ಯಾಯಕ್ಕೆ ಬೆಂಬಲ ನೀಡಿಲ್ಲ ಎಂದು ಹೆಚ್.ವಿಶ್ವನಾಥ್ ಹರಿಹಾಯ್ದರು.
Key words: H.Vishwanath- against -Shamanur Shivshankarappa- acceptance -Kantaraju's report.
Next Article