For the best experience, open
https://m.justkannada.in
on your mobile browser.

ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು:  ಕೈ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆ ಜಯ.

12:37 PM Jun 04, 2024 IST | prashanth
ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು   ಕೈ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆ ಜಯ

ಹಾಸನ,ಜೂನ್,4,2024 (www.justkannada.in):  ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಿಲುಕಿ  ಈಗಾಗಲೇ ಎಸ್ ಐಟಿ ವಶದಲ್ಲಿರುವ ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಇದೀಗ ಭಾರಿ ಮುಖಭಂಗವಾಗಿದೆ.

ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ  ಸೋಲನುಭವಿಸಿದ್ದು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 42 ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಈ ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಈ ಮೂಲಕ 25 ವರ್ಷಗಳ ಬಳಿಕ ಹಾಸನ ಕಾಂಗ್ರೆಸ್ ತೆಕ್ಕೆಗೆ ಬಿದ್ದಿದೆ.

ಪೆನ್ ಡ್ರೈವ್ ಪ್ರಕರಣದ ಸುಳಿಯಲ್ಲಿ ಸಿಲುಕಿರುವ ಪ್ರಜ್ವಲ್ ಇದೀಗ ಲೋಕಸಭೆ ಚುನಾವಣೆಯಲ್ಲಿ ಸೋಲು ಮರ್ಮಾಘಾತ ನೀಡಿದೆ.

Key words: Hassan, Prajwal Revanna, lose

Tags :

.