ಮಾಜಿ ಸಚಿವ ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ.
ಬೆಂಗಳೂರು,ಮೇ,9,2024 (www.justkannada.in): ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುಂದೂಡಿಕೆ ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠವು, ಸೋಮವಾರದ ಬೆಳಿಗ್ಗೆ 11.30ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ.ಹೀಗಾಗಿ ಹೆಚ್ ಡಿ ರೇವಣ್ಣ ಅವರಿಗೆ 3 ದಿನ ಜೈಲೇ ಗತಿಯಾದಂತೆ ಆಗಿದೆ.
ಮಹಿಳೆ ಕಿಡ್ನ್ಯಾಪ್ ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ, ಹೆಚ್.ಡಿ ರೇವಣ್ಣಗೆ ಸದ್ಯಕ್ಕೆ ಜಾಮೀನು ನೀಡದಂತೆ ಎಸ್ಐಟಿ ಪರ ಎಸ್ ಪಿಪಿ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ. ಹೆಚ್ ಡಿ ರೇವಣ್ಣ ಪರ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು.
Key words: HD Revanna, bail application, hearing, adjourned