ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ: ಜಾಮೀನು ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ SIT
ಬೆಂಗಳೂರು,ಮೇ,28,2024 (www.justkannada.in): ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಮಂಜೂರಾಗಿದ್ದ ಜಾಮೀನು ರದ್ದು ಕೋರಿ ಎಸ್ ಐಟಿ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.
ಪ್ರಜ್ವಲ್ ರೇವಣ್ಣ ವಿರುದ್ದದ ಲೈಂಗಿಕ ದೌರ್ಜನ್ಯ ಪ್ರಕರಣ ಸಂತ್ರಸ್ತ ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಶಾಸಕ ಹೆಚ್.ಡಿ ರೇವಣ್ಣಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನು ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಎಸ್‌ಐಟಿ ಅರ್ಜಿ ಸಲ್ಲಿಸಿದೆ. ಹೀಗಾಗಿ ಶಾಸಕ ಹೆಚ್.ಡಿ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾದಂತೆ ಆಗಿದೆ.
ಎಸ್‌ಐಟಿ ಶಾಸಕ ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ರದ್ದುಕೋರಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಮೇ 31ರಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ. ಸಂತ್ರಸ್ತ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ನಂತರ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಜಾಮೀನು ರದ್ದು ಕೋರಿ ಹೈಕೋರ್ಟ್ ಗೆ ಎಸ್‌ಐಟಿ ಹೈಕೋರ್ಟ್ ಮೆಟ್ಟಿಲೇರಿದೆ.
Key words: HD Revanna, cancellation, bail, SIT, High Court