ಜೈಲಿನಿಂದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಬಿಡುಗಡೆ.
01:47 PM May 14, 2024 IST
|
prashanth
ಬೆಂಗಳೂರು,ಮೇ,14,2024 (www.justkannada.in): ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಹೆಚ್.ಡಿ ರೇವಣ್ಣ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಹೆಚ್.ಡಿ ರೇವಣ್ಣ ಅವರ ಜೈಲುವಾಸ ಇಂದು ಅಂತ್ಯವಾಗಿದೆ. ಹೆಚ್.ಡಿ ರೇವಣ್ಣಗೆ ನಿನ್ನೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ದ ಜಾಮೀನು ಮಂಜೂರು ಮಾಡಿತ್ತು.
ಈ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಹೆಚ್.ಡಿ ರೇವಣ್ಣ ಬಿಡುಗಡೆಯಾಗಿದ್ದಾರೆ. ಇನ್ನು ಹೆಚ್.ಡಿ ರೇವಣ್ಣ ಬಿಡುಗಡೆ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ಬಳಿ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದ್ದರು. ಈ ವೇಳೆ ಪೊಲೀಸರು ಲಾಠಿಚಾರ್ಜ್ ನಡೆಸಿ ಕಾರ್ಯಕರ್ತರನ್ನ ಚದುರಿಸಿದ್ದಾರೆ ಎನ್ನಲಾಗಿದೆ.
Key words: HD Revanna, released, jail
Next Article