For the best experience, open
https://m.justkannada.in
on your mobile browser.

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾಗಿ ಸಾರಿಗೆ, ಹೆದ್ದಾರಿ ಯೋಜನೆ ಕುರಿತು ಮಾತುಕತೆ ನಡೆಸಿದ ಹೆಚ್.ಡಿಕೆ

04:29 PM Jul 09, 2024 IST | prashanth
ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾಗಿ ಸಾರಿಗೆ  ಹೆದ್ದಾರಿ ಯೋಜನೆ ಕುರಿತು ಮಾತುಕತೆ ನಡೆಸಿದ ಹೆಚ್ ಡಿಕೆ

ನವದೆಹಲಿ,ಜುಲೈ,9,2024 (www.justkannada.in): ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾಗಿ ಕರ್ನಾಟಕ ರಾಜ್ಯದ ಸಾರಿಗೆ, ಹೆದ್ದಾರಿ ಯೋಜನೆಗಳ ಕುರಿತು ಮಾತುಕತೆ ನಡೆಸಿದರು.

ಈ ಸಂಬಂಧ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಕರ್ನಾಟಕದಲ್ಲಿ ಬಾಕಿ ಇರುವ ಸಾರಿಗೆ, ಹೆದ್ದಾರಿ ಯೋಜನೆಗಳನ್ನು ಶೀಘ್ರವೇ ಕಾರ್ಯಗತಗೊಳಿಸಿವುದು, ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಲಾಯಿತು.

ಮಂಡ್ಯ ನಗರದ ಹೊರ ವರ್ತುಲ ರಸ್ತೆ ಹಾಗೂ ಹಲಗೂರು - ಕೆ.ಎಂ.ದೊಡ್ಡಿ ರಸ್ತೆಯನ್ನು ಮೇಲ್ದರ್ಜೆಗೇರಿಸಿ ರಾಷ್ಟ್ತ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಯೋಜನೆಯ ಬಗ್ಗೆಯೂ  ಚರ್ಚಿಸಲಾಯಿತು. ಸಚಿವರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಕೋಲಾರ ಸಂಸದರಾದ ಶ್ರೀ ಮಲ್ಲೇಶ್ ಬಾಬು ಅವರು ನನ್ನ ಜತೆಯಲ್ಲಿದ್ದರು ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

Key words: HDK, met, Union Minister, Nitin Gadkari

Tags :

.