ಹೆಚ್.ಡಿಕೆ ಕೇಸರಿ ಶಾಲು ಹಾಕಬಾರದಿತ್ತು- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ.
05:58 PM Feb 02, 2024 IST
|
prashanth
ನವದೆಹಲಿ,ಫೆಬ್ರವರಿ,2,2024(www.justkannada.in): ಮಂಡ್ಯ ತಾಲೂಕಿನ ಕೆರಗೋಡ ಗ್ರಾಮದ ಹನುಮ ಧ್ವಜ ತೆರವು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಜೊತೆ ಪಾಲ್ಗೊಂಡು ಕೇಸರಿ ಶಾಲು ಹಾಕಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಡೆಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಆಕ್ಷೇಪಿಸಿದ್ದಾರೆ.
ಈ ಕುರಿತು ಮಾತನಾಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಹೆಚ್.ಡಿ ಕುಮಾರಸ್ವಾಮಿ ಕೇಸರಿ ಶಾಲು ಹಾಕಬಾರದಿತ್ತು, ನಮ್ಮ ಪಕ್ಷದ ಶಾಲು ಹಾಕಬಹುದಿತ್ತು ಎಂದಿದ್ದಾರೆ.
ನಾನು ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ. ನಾಳೆ ನರೇಂದ್ರ ಮೋದಿ ಜೊತೆಗೆ ಹೋದಾಗಲೂ ಜೆಡಿಎಸ್ ಪಕ್ಷದ ಶಾಲು ಹಾಕುತ್ತೇನೆ. ಪ್ರತಿಭಟನೆಯ ವೇಳೆ ಯಾರೋ ಬಂದು ಕೇಸರಿ ಶಾಲು ಹಾಕಿರುತ್ತಾರೆ. ಆಯಾ ಸಂದರ್ಭಕ್ಕೆ ಹಾಕಿರುತ್ತಾರೆ, ಈ ಬಗ್ಗೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.
Key words: HDK -saffron shawl - Former PM-HD Deve Gowda.
Next Article