HomeBreaking NewsLatest NewsPoliticsSportsCrimeCinema

ರಾಜ್ಯದ ಹಲವೆಡೆ ಜೂನ್ 13ರ ವರೆಗೂ ಭಾರಿ ಮಳೆ ಸಾಧ್ಯತೆ.

12:39 PM Jun 08, 2024 IST | prashanth

ಬೆಂಗಳೂರು,ಜೂನ್,8,2024(www.justkannada.in): ಕಳೆದ ಬಾರಿ ಕೈ ಕೊಟ್ಟಿದ್ದ ಮುಂಗಾರು ಮಳೆ ಈ ಬಾರಿ ಉತ್ತಮವಾಗಿ ಆರಂಭವಾಗಿದ್ದು ರಾಜ್ಯದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾರೆ. ಈ ಮಧ್ಯೆ ರಾಜ್ಯದ ಹಲವೆಡೆ ಜೂನ್ 13ರ ವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು  ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.

ನಿನ್ನೆ ರಾತ್ರಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಿದ್ದು ಇಂದು ಸಹ ವರುಣನ ಕೃಪೆ ಮುಂದುವೆಯಲಿದೆ. ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಸಂಭವವಿದ್ದು, ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.  ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.  ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯಿಂದ ವರದಿಯಾಗಿದೆ.

Key words: Heavy rain, state , till, June 13

Tags :
Heavy rain - state -till -June 13.
Next Article