For the best experience, open
https://m.justkannada.in
on your mobile browser.

ಉಡುಪಿಯಲ್ಲಿ ಭಾರಿ ಮಳೆ: ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

10:31 AM Jul 06, 2024 IST | prashanth
ಉಡುಪಿಯಲ್ಲಿ ಭಾರಿ ಮಳೆ  ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ,ಜುಲೈ,6,2024 (www.justkannada.in):  ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದ್ದು,  ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಈ ಮಧ್ಯೆ ಕರಾವಳಿ ಭಾಗದಲ್ಲಿ  ಮಳೆರಾಯನ ಅಬ್ಬರ ಜೋರಾಗಿದೆ.

ಉಡುಪಿಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಉಡುಪಿ ಜಿಲ್ಲೆಯ ಗ್ರಾಮಾಂತರ ಭಾಗದಲ್ಲೂ ವರುಣನ ಆರ್ಭಟ ಜೋರಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

Key words: Heavy rain, Udupi, Holiday, schools, colleges

Tags :

.