HomeBreaking NewsLatest NewsPoliticsSportsCrimeCinema

ಮಾಜಿ ಸಿಎಂ ಹೆಚ್.ಡಿಕೆಗೆ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ.

03:25 PM Apr 19, 2024 IST | prashanth

ಬೆಂಗಳೂರು,ಏಪ್ರಿಲ್,19,2024 (www.justkannada.in): ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿಗೆ ರಾಜ್ಯ ಮಹಿಳಾ ಆಯೋಗ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಹೇಳಿಕೆ ಸಂಬಂಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಈ ಮೂಲಕ ಬಿಗ್ ರಿಲೀಫ್ ಸಿಕ್ಕಿದೆ. ಈ ಸಂಬಂಧ ಮಹಿಳಾ ಆಯೋಗದ ಅಧ್ಯಕ್ಷ ಡಾ. ನಾಗಲಕ್ಷ್ಮಿ ಚೌದರಿ ಅವರಿಗೆ ಹೈಕೋರ್ಟ್ ನೋಟಿಸ್ ನೀಡಿದೆ.

ಹೈಕೋರ್ಟ್ ನಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪರ ವಾದ ಮಂಡಿಸಿದ ವಕೀಲ ಎವಿ ನಿಶಾಂತ್,  ದೂರುಗಳು ಇಲ್ಲದಿದ್ದರೂ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಸ್ವತಃ ಅಧ್ಯಕ್ಷೆ ಸ್ಪಷ್ಟೀಕರಣ ಕೇಳಿ ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದಾರೆ  ಮಹಿಳಾ ಆಯೋಗದ ಅಧ್ಯಕ್ಷೆ ನೋಟಿಸ್ ನೀಡಿದ್ದಾರೆ ಎಂದು ಹೇಳಿದರು.

ಕಾರಣ ಕೇಳಿ ಕುಮಾರಸ್ವಾಮಿಗೆ ನೋಟಿಸ್ ನೀಡಿಲ್ಲ ಸಮನ್ಸ್ ನೀಡಿಲ್ಲ ಸ್ಪಷ್ಟೀಕರಣ ನೀಡಿ ಇಲ್ಲವಾದರೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ರಾಜ್ಯ ಮಹಿಳಾ ಆಯೋಗದ ಕ್ರಮ ವ್ಯಾಪ್ತಿ ಮೀರಿದಂತಿದೆ ಎಂದು ನ್ಯಾ. ಎಂ. ನಾಗ ಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

Key words: High Court, notice, H.D Kumaraswamy

Tags :
High Court- notice - former CM -H.D Kumaraswamy
Next Article