ಹೈಕಮಾಂಡ್ ಸೂಚಿಸಿದ್ರೆ ಸಚಿವ ಸ್ಥಾನ ಬಿಟ್ಟುಕೊಡಲು ಸಿದ್ಧ-ಗೃಹ ಸಚಿವ ಡಾ.ಜಿ.ಪರಮೇಶ್ವರ್.
ಬೆಂಗಳೂರು,ಅಕ್ಟೋಬರ್,31,2023(www.justkannada.in): ಎರಡುವರೆ ವರ್ಷದ ಬಳಿಕ ರಾಜ್ಯ ಸಚಿವ ಸಂಪುಟ ಬದಲಾವಣೆಯಾಗುತ್ತೆ ಎಂದು ಕಾಂಗ್ರೆಸ್ ಮುಖಂಡರು ಹೇಳಿಕೆ ನೀಡಿತ್ತಿರುವ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ. ಪರಮೇಶ್ವರ್, ಹೈಕಮಾಂಡ್ ಸೂಚಿಸಿದರೆ ನನ್ನ ಸಚಿವ ಸ್ಥಾನವನ್ನು ಬಿಟ್ಟು ಕೊಡಲು ಸಿದ್ಧನಿದ್ದೇನೆ ಎಂದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಡಾ.ಜಿ ಪರಮೇಶ್ವರ್, ಸಚಿವ ಸ್ಥಾನದ ಕುರಿತು ಹೈಕಮಾಂಡ್ ನಿರ್ಧಾರ ಮಾಡಲಿದೆ. ಯಾರಿಗೆ ಯಾವ ಹುದ್ದೆ ಕೊಡಬೇಕೆಂದು ವರಿಷ್ಠರು ನಿರ್ಧರಿಸುತ್ತಾರೆ. ಹೈಕಮಾಂಡ್ ಸಚಿವ ಸ್ಥಾನ ಬಿಟ್ಟುಕೊಡಿ ಅಂದರೇ ಬಿಟ್ಟುಕೊಡುತ್ತೇನೆ ಹೈಕಮಾಂಡ್ ನಿರ್ಧಾರಕ್ಕೆ ನಾನು ಯಾವಾಗಲೂ ಬದ್ಧನಾಗಿದ್ದೇನೆ ಎಂದರು.
ಭಾರತೀಯ ಜನತಾ ಪಕ್ಷದ ವಿಚಾರವಾಗಿ ಹೆಚ್ಚು ತಲೆಕೆಡಿಸಿಕೊಳ್ಳಲ್ಲ. ಬಿಜೆಪಿಯ ಪ್ರತಿಯೊಬ್ಬ ನಾಯಕರೂ ನಮ್ಮ ಬಗ್ಗೆ ಮಾತನಾಡುತ್ತಾರೆ. ಬಿಜೆಪಿಯವರಿಗೆ ನಮ್ಮ ಪಕ್ಷದ ಮೇಲೆ ಹೆಚ್ಚು ಆಸಕ್ತಿ ಇದ್ದಂತೆ ಕಾಣ್ತಿದೆ. ಅವರೆಲ್ಲರೂ ನಮ್ಮ ಪಕ್ಷಕ್ಕೆ ಬರ್ತಾರೇನೋ. ಅದಕ್ಕಾಗಿ ನಮ್ಮ ಪಕ್ಷದ ಬಗ್ಗೆ ಹೆಚ್ಚು ಚರ್ಚೆ ನಡೆಸುತ್ತಿದ್ದಾರೇನೋ? ಎಂದು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದರು.
Key words: Home Minister-Dr. G. Parameshwar - ministerial -position - High Command