For the best experience, open
https://m.justkannada.in
on your mobile browser.

ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರದ ಕೊಂಬೆ: ಮೂವರಿಗೆ ಗಂಭೀರ ಗಾಯ.

03:37 PM Feb 13, 2024 IST | prashanth
ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರದ ಕೊಂಬೆ  ಮೂವರಿಗೆ ಗಂಭೀರ ಗಾಯ

ಶಿವಮೊಗ್ಗ, ಫೆಬ್ರವರಿ,13,2024(www.justkannada.in): ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಬೈಕ್ ಓಡಿಸುತ್ತಿದ್ದ ಮಾವ ಮಹಮ್ಮದ್ ಶಫಿ, ಬೈಕ್ ಹಿಂಬದಿಯಲ್ಲಿದ್ದ ಸೊಸೆ ಮತ್ತು ಮೊಮ್ಮಗಳಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್​ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೃಹತ್ ಮರದ ಕೊಂಬೆ ಬಿದ್ದ ಹಿನ್ನಲೆ ಬೈಕ್​ ನಿಂದ ಜಾರಿ ಬಿದ್ದು ಮೂವರಿಗೆ ಗಂಭೀರ ಗಾಯವಾಗಿದೆ. ಗ್ರಾಮಸ್ಥರು ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ.

Key words: Huge -tree  -fell – bike-3 seriously -injured

Tags :

.