ಬೈಕ್ ಮೇಲೆ ಬಿದ್ದ ಬೃಹತ್ ಗಾತ್ರದ ಮರದ ಕೊಂಬೆ: ಮೂವರಿಗೆ ಗಂಭೀರ ಗಾಯ.
03:37 PM Feb 13, 2024 IST
|
prashanth
Tags :
ಶಿವಮೊಗ್ಗ, ಫೆಬ್ರವರಿ,13,2024(www.justkannada.in): ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಬೈಕ್ ಓಡಿಸುತ್ತಿದ್ದ ಮಾವ ಮಹಮ್ಮದ್ ಶಫಿ, ಬೈಕ್ ಹಿಂಬದಿಯಲ್ಲಿದ್ದ ಸೊಸೆ ಮತ್ತು ಮೊಮ್ಮಗಳಿಗೆ ಗಾಯವಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೃಹತ್ ಮರದ ಕೊಂಬೆ ಬಿದ್ದ ಹಿನ್ನಲೆ ಬೈಕ್ ನಿಂದ ಜಾರಿ ಬಿದ್ದು ಮೂವರಿಗೆ ಗಂಭೀರ ಗಾಯವಾಗಿದೆ. ಗ್ರಾಮಸ್ಥರು ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ.
Key words: Huge -tree -fell – bike-3 seriously -injured
Next Article