ಬಿಜೆಪಿ ಅವಧಿಯಲ್ಲಿ ಮುಡಾ ಸೈಟ್ ಅಕ್ರಮ ಹಂಚಿಕೆ: ಶೀಘ್ರದಲ್ಲೇ ಪಟ್ಟಿ ರಿಲೀಸ್- ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು,ಜುಲೈ,25,2024 (www.justkannada.in): ಬಿಜೆಪಿ ಸರ್ಕಾರದ ಅವಧಿಯಲ್ಲಿಅಕ್ರಮವಾಗಿ ಮುಡಾ ನಿವೇಶನ ಹಂಚಿಕೆ ಮಾಡಲಾಗಿದೆ. ಈ ಸಂಬಂಧ ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎರಡು ವರ್ಷಗಳ ಹಿಂದೆಯೇ ಬಿಜೆಪಿ ಆಡಳಿತಾವಧಿಯಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಈ ನಿವೇಶನಗಳನ್ನು ಬಿಜೆಪಿಯವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಶೀಘ್ರದಲ್ಲೇ ಆ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದರು.
ನಿಗಮ ಮಂಡಳಿಗಳಲ್ಲಿಆಗಿರುವ ಅಕ್ರಮಗಳ ಬಗ್ಗೆ ಚರ್ಚೆಗೆ ಅವಕಾಶ ಕಲ್ಪಿಸಿದ್ದೆವು. ಬಿಜೆಪಿಯವರು ತಮಗೆ ಏನೇನು ಬೇಕೋ ಅದನ್ನು ಹೇಳಿದರು. ಆದರೆ ಮುಖ್ಯಮಂತ್ರಿಗಳಿಂದ ಉತ್ತರ ಪಡೆಯಲು ಅವಕಾಶವನ್ನೇ ನೀಡಲಿಲ್ಲ. ಮುಖ್ಯಮಂತ್ರಿಗಳು ಲಿಖಿತ ರೂಪದಲ್ಲಿ ಬಿಜೆಪಿಯವರ ಕಾಲದ ನಿಗಮಗಳಲ್ಲಿನ ಅಕ್ರಮಗಳನ್ನು ತೆರೆದಿಟ್ಟಿದ್ದಾರೆ. ಬಿಜೆಪಿಯವರು ತಮ್ಮ ಕಾಲದಲ್ಲಿನ ಹಗರಣ ಬಹಿರಂಗವಾಗದಂತೆ ತಡೆಯಲು ಮುಖ್ಯಮಂತ್ರಿಗಳ ಉತ್ತರಕ್ಕೆ ಅವಕಾಶ ನೀಡಲಿಲ್ಲ. ಈ ಅಕ್ರಮಗಳ ಬಗ್ಗೆ ನಮ್ಮ ಸರ್ಕಾರ ತನಿಖೆಗೆ ಆದೇಶ ನೀಡಿದೆ. ಹೀಗಾಗಿ ಈ ಹಗರಣಗಳ ವಿಷಯ ಮುಚ್ಚಿಹಾಕಲು ಪ್ರತಿಭಟನೆ ನಡೆಸಿದ್ದಾರೆ ಎಂದು ಡಿಕೆ ಶಿವಕುಮಾರ್ ಆರೋಪಿಸಿದರು.
Key words: Illegal allocation, Muda, BJP, DCM DK Shivakumar