For the best experience, open
https://m.justkannada.in
on your mobile browser.

ವಿಪಕ್ಷ ನಾಯಕರು ಕೇಳಿದ ಮಾತ್ರಕ್ಕೆ ಸಚಿವರು ರಾಜೀನಾಮೆ ಕೊಡಬೇಕಾ..?  ಪ್ರಿಯಾಂಕ್ ಖರ್ಗೆ ಕಿಡಿ.

05:18 PM Jun 01, 2024 IST | prashanth
ವಿಪಕ್ಷ ನಾಯಕರು ಕೇಳಿದ ಮಾತ್ರಕ್ಕೆ ಸಚಿವರು ರಾಜೀನಾಮೆ ಕೊಡಬೇಕಾ     ಪ್ರಿಯಾಂಕ್ ಖರ್ಗೆ ಕಿಡಿ

ಕಲಬುರಗಿ,ಜೂನ್,1,2024 (www.justkannada.in): ಎಸ್ ಟಿ ನಿಗಮ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿದ ವಿಪಕ್ಷ ಬಿಜೆಪಿಯ ನಾಯಕರ ವಿರುದ್ದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ,  ವಿರೋಧ ಪಕ್ಷದವರು ಕೇಳಿದ ಮಾತ್ರಕ್ಕೆ ಸಚಿವರು ರಾಜೀನಾಮೆ‌ ನೀಡಬೇಕಾ? ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಸಿಎಂ ಅವರ ಪರಮಾಧಿಕಾರವಾಗಿದೆ. ಪ್ರಕರಣದ ಬಗ್ಗೆ ಎಸ್‌ಐಟಿ ತನಿಖೆಗೆ ಆದೇಶಿಸಲಾಗಿದೆ. ಪ್ರಾಥಮಿಕ‌ ವರದಿ ಬರಲಿ, ಅಗತ್ಯ ಬಿದ್ದರೆ ಸಿಬಿಐಗೂ ಕೊಡೋಣ ಎಂದರು.

ವಾಲ್ಮೀಕಿ ನಿಗಮದ ಹಗರಣ ಕುರಿತಂತೆ ಸರ್ಕಾರ ಈಗಾಗಲೇ ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಅಧಿಕಾರಿಗಳ ತಂಡ ಕೂಡಾ ರಚನೆಯಾಗಿದೆ ತಂಡ ತನಿಖೆ‌ ನಡೆಸಲಿ. ಇದರಲ್ಲಿ ಯಾರನ್ನೂ ರಕ್ಷಿಸುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ಆದರೆ, ವಿರೋಧ ಪಕ್ಷದವರು ಕೇಳಿದ ಮಾತ್ರಕ್ಕೆ ಸಚಿವರ ರಾಜೀನಾಮೆ‌ ಸಲ್ಲಿಸಬೇಕಾ? ಈ ವಿಚಾರದಲ್ಲಿ ಏನೇ ಹೇಳಲಿ ಸಚಿವರ ರಾಜೀನಾಮೆ ಪಡೆಯುವುದು ಸಿಎಂ ಅವರ ಪರಮಾಧಿಕಾರವಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: illegal, transfer, Valmiki, Corporation, Priyank Kharge

Tags :

.