For the best experience, open
https://m.justkannada.in
on your mobile browser.

ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳ-ಸಿಎಂ ಸಿದ್ದರಾಮಯ್ಯ.

10:38 AM Feb 16, 2024 IST | prashanth
ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,16,2024(www.justkannada.in):  ತೆರಿಗೆ ಸಂಗ್ರಹದಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳವಾಗಿದೆ. ಇದರ ಪರಿಣಾಮ ತೆರಿಗೆ ಸಂಗ್ರಹ ಹೆಚ್ಚಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯಬಜೆಟ್ ಮಂಡನೆ ಮಾಡುತ್ತಿದ್ದು, ಗ್ಯಾರಂಟಿ ಯೋಜನೆಗಳನ್ನ ಟೀಕಿಸಿದ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಕೇಂದ್ರ ಮಾಡದ ಕೆಲಸ ನಾವು ಮಾಡಿದ್ದೇವೆ. ಗ್ಯಾರಂಟಿ ಯೋಜನೆಯಿಂದ ನಮ್ಮತ್ತ ಮೆಚ್ಚುಗೆ ಬಂದಿದೆ. ಮಹಿಳೆಯರು ಯುವಕರಿಂದ ಗ್ಯಾರಂಟಿ ಮೇಲೆ ನಂಬಿಕೆ ಬಂದಿದೆ.   ನಮ್ಮ ಗ್ಯಾರಂಟಿ ಕದ್ದು ಅವರ ಗ್ಯಾರಂಟಿ ಎಂದು ಬಿಂಬನೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ. ಗ್ಯಾರಂಟಿ ಜಾರಿಗಾಗಿ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡುತ್ತಿವೆ. ಹಲವು ದೇಶಗಳು, ಅಂತಾರಾಷ್ಟ್ರೀಯ ಸಂಸ್ಥೆಗಳು ನಮ್ಮ ಯೋಜನೆಗಳ ಬಗ್ಗೆ ಅಧ್ಯಯನ ನಡೆಸಿವೆ ಎಂದರು.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.

Key words: Increase – people- income -guarantee schemes-CM -Siddaramaiah

Tags :

.