ಅನರ್ಹ ಬಿಪಿಎಲ್ ಕಾರ್ಡುದಾರರಿಗೆ ಶಾಕ್: ಎಪಿಎಲ್ ಕಾರ್ಡ್ ಗೆ ವರ್ಗಾವಣೆ
ಬೆಂಗಳೂರು,ಸೆಪ್ಟಂಬರ್,7,2024 (www.justkannada.in): ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿ ಅಕ್ಕಿಗೆ ಬದಲಾಗಿ ಹಣ ಪಾವತಿಸುತ್ತಿರುವ ರಾಜ್ಯಕಾಂಗ್ರೆಸ್ ಸರ್ಕಾರ ಇದೀಗ ಅನರ್ಹ ಬಿಪಿಎಲ್ ಕಾರ್ಡುದಾರರಿಗೆ ಶಾಕ್ ನೀಡಲು ಮುಂದಾಗಿದೆ. ಅನರ್ಹ ಬಿಪಿಎಲ್ ಕಾರ್ಡ್ ಗಳನ್ನ ಎಪಿಎಲ್ ಕಾರ್ಡ್ ಆಗಿ ವರ್ಗಾವಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು, ರಾಜ್ಯದಲ್ಲಿ ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ.. ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವುದು ತಿಳಿದಿದೆ. ಇಂತಹ ಅನರ್ಹ ಬಿಪಿಎಲ್ ಕಾರ್ಡುದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಅಕ್ರಮ ದಾಖಲೆ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿರುವವರನ್ನು ಸರಕಾರ ಪತ್ತೆ ಹಚ್ಚುತ್ತಿದ್ದು, ರಾಜ್ಯದಲ್ಲಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದೆ. ಈ ಪೈಕಿ 98,431 ಮಂದಿ ಆದಾಯ ತೆರಿಗೆ ಪಾವತಿದಾರರು, 10,04,716 ಮಂದಿ 1.20 ಲಕ್ಷ ರೂ.ಗಳ ಅಧಿಕ ಆದಾಯ ಹೊರಂದಿರುವವರು, 4,036 ಮಂದಿ ಸರ್ಕಾರಿ ನೌಕರರಿರುವುದು ಪತ್ತೆಯಾಗಿದೆ.
Key words: ineligible, BPL cardholders, APL card, minister, Muniyappa