For the best experience, open
https://m.justkannada.in
on your mobile browser.

ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ: ಪ್ರಧಾನಿ ಮೋದಿ ಸಂತಾಪ.

11:06 AM May 20, 2024 IST | prashanth
ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ  ಪ್ರಧಾನಿ ಮೋದಿ ಸಂತಾಪ

ನವದೆಹಲಿ,ಮೇ,20,2024 (www.justkannada.in):  ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ನಿಧನರಾಗಿದ್ದು , ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ ನ ಅಧ್ಯಕ್ಷ ಡಾ. ಸೈಯದ್ ಇಬ್ರಾಹಿಂ ರೈಸಿ ಅವರ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವಲ್ಲಿ ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಎರಡು ದೇಶದಗಳ ಸಂಬಂಧ ಸುಧಾರಿಸಲು ಇಬ್ರಾಹಿಂ ರೈಸಿ ಶ್ರಮಿಸಿದರು. ಅವರ ಕೊಡುಗೆ ಅಪಾರ.

ಇಬ್ರಾಹಿಂ ರೈಸಿ ಅವರ ಕುಟುಂಬ ಮತ್ತು ಇರಾನ್ ಜನತೆಗೆ ಸಂತಾಪಗಳನ್ನು ಸೂಚಿಸುತ್ತೇನೆ. ಈ ದುಃಖದ ಸಮಯದಲ್ಲಿ ಭಾರತ ಇರಾನ್ ಜೊತೆ ನಿಲ್ಲಲಿದೆ ಎಂದು  ಮೋದಿ ಟ್ವೀಟ್ ಮಾಡಿದ್ದಾರೆ.

Key words: Iranian-President-Ibrahim Raisi –dies-PM Modi- condoles

Tags :

.