For the best experience, open
https://m.justkannada.in
on your mobile browser.

ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

05:52 PM Oct 27, 2023 IST | thinkbigh
ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ   ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಅಕ್ಟೋಬರ್ 27, 2023 (www.justkannada.in): ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್    ಮಾಡಿರುವ ಅವರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ.

ರಾಜ್ಯದ ಜನ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದರೆ ಕೇಂದ್ರ ನೆರವು ನೀಡುವ ಬದಲು ಕುರುಡಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿದೆ ಸಿದ್ದರಾಮಯ್ಯ ಅವರು ಮಾಡಿರುವ ಟ್ವೀಟ್…

ಪ್ರಧಾನಿ @narendramodi ಅವರೇ, 2019ರಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ರಾಜ್ಯ ಸಾವು ನೋವಿನಲ್ಲಿ ಮುಳುಗಿತು, ಲಕ್ಷಾಂತರ ಕುಟುಂಬಗಳು ಮನೆ, ಆಸ್ತಿಪಾಸ್ತಿ ಕಳೆದುಕೊಂಡು ಬೀದಿಪಾಲಾದವು, ಆದರೂ ನೀವು ಕರ್ನಾಟಕಕ್ಕೆ ಬರಲಿಲ್ಲ. ರಾಜ್ಯದ ಜನರಿಗಾದ ಅಪಾರ ನಷ್ಟಕ್ಕೆ ಕೇಂದ್ರದ ನೆರವಿನ ಮೊರೆ ಹೋದರೆ ಮತ್ತೆ ಕನ್ನಡಿಗರಿಗೆ ಸಿಕ್ಕಿದ್ದು ಬಿಡಿಗಾಸು ಮಾತ್ರ. ನಿಮ್ಮ ನೇತೃತ್ವದ @BJP4India ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ #AnswerMadiModi

Tags :

.