ಕರವೇ ಅಧ್ಯಕ್ಷ ನಾರಾಯಣಗೌಡರಿಗೆ ಜಾಮೀನು ಮಂಜೂರು.
ಬೆಂಗಳೂರು, ಜನವರಿ, 10,2024(www.justkannada.in): 2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಅವರಿಗೆ ಜಾಮೀನು ಮಂಜೂರಾಗಿದೆ.
ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯ ಕರವೇ ಅಧ್ಯಕ್ಷ ನಾರಾಯಣಗೌಡರಿಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಇತ್ತೀಚೆಗೆ ನಾಮಫಲಕ ಧ್ವಂಸ ಪ್ರಕರಣದಲ್ಲಿ ಜೈಲು ಸೇರಿದ್ದ ನಾರಾಯಣಗೌಡ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ 2017ರ ಹಳೇ ಪ್ರಕರಣದಲ್ಲಿ ಬಂಧಿತರಾಗಿದ್ದರು.
2017 ರಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಉಂಟು ಮಾಡಿದ ಪ್ರಕರಣ ಸಂಬಂಧ ನಾರಾಯಣಗೌಡ ಅವರನ್ನು ನಿನ್ನೆಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದರು. ಇನ್ನು ನಾರಾಯಣಗೌಡ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ್ದ ಬೆಂಗಳೂರಿನ 30ನೇ ಎಸಿಎಂಎಂ ನ್ಯಾಯಾಲಯ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಇದೀಗ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
Key words: Karave -President -Narayana Gowda -granted -bail.