ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ.
ನವದೆಹಲಿ, ಡಿಸೆಂಬರ್ 19,2023(www.justkannada.in): ರಾಜ್ಯದಲ್ಲಿ ಮಳೆ ಸರಿಯಾಗಿ ಆಗದೆ ಜಲಾಶಯಗಳು ಭರ್ತಿಯಾಗದೆ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕುಡಿಯುವ ನೀರಿಗೂ ಹಾಹಾಕಾರ ಉಂಟಾಗುವ ಪರಿಸ್ಥಿತಿ ಇದೆ. ಹೀಗಿದ್ದರೂ ಸಹ ಮತ್ತೆ ಮತ್ತೆ ಕರ್ನಾಟಕಕ್ಕೆ ಕಾವೇರಿ ನದಿ ನೀರು ವಿಚಾರದಲ್ಲಿ ಅನ್ಯಾಯವಾಗುತ್ತಿದ್ದು, ಇದೀಗ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ.
ತಮಿಳುನಾಡಿಗೆ ಮತ್ತೆ ಪ್ರತಿನಿತ್ಯ 1030 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ(ಸಿಡಬ್ಲ್ಯುಆರ್‌ಸಿ) ಸೂಚಿಸಿದೆ. ಡಿಸೆಂಬರ್ ಅಂತ್ಯದವರೆಗೆ 3,128 ಕ್ಯೂಸೆಕ್ ನೀರು ಹರಿಸಬೇಕು. ಹಾಗೆಯೇ ಜನವರಿಯಲ್ಲಿ 1,030 ಕ್ಯೂಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕರ್ನಾಟಕದಲ್ಲಿ ಮಳೆ ಕೊರತೆಯಿಂದ ತೀವ್ರ ಬರಲಾಗ ಆವರಿಸಿದ್ದು , ಮುಂದೆ ಬರುವ ಬೇಸಿಗೆಗೆ ಜಲಾಶಯಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆಗಳಿವೆ. ಇಂತಹ ಪರಿಸ್ಥಿತಿ ಇದ್ದರೂ ನೀರು ಬಿಡಲು ಆದೇಶಿಸಿರುವ ಸಿಡಬ್ಲ್ಯುಆರ್‌ಸಿ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.
Key words: Karnataka – Cauvery water- issue-release -water - Tamil Nadu