ಹೊಸ ಇತಿಹಾಸ ಸೃಷ್ಟಿಸಲು ಕರ್ನಾಟಕ ರಾಜ್ಯ ಪ್ರಮುಖ ಕೇಂದ್ರ- ರಣದೀಪ್ ಸಿಂಗ್ ಸುರ್ಜೇವಾಲ.
12:46 PM Nov 21, 2023 IST | prashanth
ಬೆಂಗಳೂರು,ನವೆಂಬರ್,21,2023(www.justkannada.in): ಹೊಸ ಇತಿಹಾಸ ಸೃಷ್ಟಿಸಲು ಕರ್ನಾಟಕ ರಾಜ್ಯ ಪ್ರಮುಖ ಕೇಂದ್ರವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.
ಲೋಕಸಭೆ ಚುನಾವಣೆ ಹಿನ್ನೆಲೆ ಹಲವು ವಿಚಾರಗಳ ಕುರಿತು ಚರ್ಚಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ದು ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು.
ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಬೆಂಗಳೂರಿಗೆ ಬಂದಿದ್ದೇನೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಮತ ಸೆಳೆಯಬೇಕಿದೆ. ಹೊಸ ಇತಿಹಾಸ ಸೃಷ್ಟಿಸಲು ಕರ್ನಾಟಕ ರಾಜ್ಯ ಪ್ರಮುಖ ಕೇಂದ್ರ. ರಾಜ್ಯದ ರೀತಿ ನಮಗೆ ಬೇರೆ ಕಡೆಯೂ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ಲೋಕಸಭಾ ಸ್ಥಾನಗಳ ಬಗ್ಗೆಯೂ ಚರ್ಚೆ ಮಾಡುತ್ತೇವೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.
Key words: Karnataka - center - create -new history- Randeep Singh Surjewala.