For the best experience, open
https://m.justkannada.in
on your mobile browser.

ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗಲು ಸಾಧ್ಯವೇ ಇಲ್ಲ-  ಸಿಎಂ ಸಿದ್ದರಾಮಯ್ಯ ತಿರುಗೇಟು.

02:46 PM May 13, 2024 IST | prashanth
ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗಲು ಸಾಧ್ಯವೇ ಇಲ್ಲ   ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು,ಮೇ,13, 2024 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಪತನದ ಬಗ್ಗೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗಲು ಸಾಧ್ಯವೇ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನವಾಗಲಿದೆ, ನಾಥ್ ಮಾದರಿ ಆಪರೇಷನ್ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆ ನೀಡಿದ್ದರು.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ , ಏಕನಾಥ ಶಿಂಧೆ ಭ್ರಮೆಯಲ್ಲಿದ್ದಾರೆ. ಅವರು ಹಗಲುಗನಸು ಕಾಣುತ್ತಿದ್ದಾರೆ. ಯಾವ ಕಾರಣಕ್ಕೂ ನಮ್ಮ ಕಾಂಗ್ರೆಸ್ ಸರ್ಕಾರ ಪತನವಾಗಲ್ಲ. ಈ ಬಾರಿ ಪಾರ್ಲಿಮೆಟ್ ನಲ್ಲಿಯೇ ಎನ್ ಡಿಎ ಸೋಲಲಿದೆ. ಅಂದ ಮೇಲೆ ಯಾವ ಆಪರೇಷನ್ ಮಾಡಲು ಸಾಧ್ಯ ಎಂದು ಟಾಂಗ್ ಕೊಟ್ಟರು.

ಕಳೆದ ಒಂದುವರೆ ವರ್ಷದಿಂದಲೂ ಬಿಜೆಪಿಯವರು ಆಪರೇಷನ್ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಮಹಾರಾಷ್ಟ್ರದಂತೆ ಇಲ್ಲಿ ಮಾಡಲು ಸಾಧ್ಯವೇ ಇಲ್ಲ. ಯಾವ ಕಾರಣಕ್ಕೂ ನಮ್ಮ ಸರ್ಕಾರ ಬೀಳುವುದೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Key words:  Karnataka, Government, CM, Siddaramaiah

Tags :

.