HomeBreaking NewsLatest NewsPoliticsSportsCrimeCinema

ಕರ್ನಾಟಕದ ಟ್ಯಾಬ್ಲೋ ತಿರಸ್ಕಾರ: ಕೇಂದ್ರದ ವಿರುದ್ದ ಸಿಎಂ ಸಿದ್ದರಾಮಯ್ಯ ಗರಂ.

02:32 PM Jan 10, 2024 IST | prashanth

ಬೆಂಗಳೂರು,ಜನವರಿ,10,2024(www.justkannada.in):  ಜನವರಿ 26ರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸ್ತಬ್ಧಚಿತ್ರ ಪ್ರದರ್ಶನವನ್ನ ತಿರಸ್ಕರಿಸಿರುವ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದು ಕರ್ನಾಟಕಕ್ಕೆ ಆಗಿರುವ ಅನ್ಯಾಯ,  ಅಪಮಾನ ಈ ಹಿಂದೆಯೂ ರಾಜ್ಯದ ಟ್ಯಾಬ್ಲೋ ತಿರಸ್ಕಾರ ಮಾಡಿದ್ದರು. ಈ ಸಂಬಂಧ ಈಗಾಗಲೇ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ.  ಮತ್ತೆ ಪತ್ರ ಬರೆಯುವೆ ಎಂದು ಹೇಳಿದರು.

ಕರ್ನಾಟಕಕ್ಕೆ ನಿರಂತರವಾಗಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದಿಂದ ಕನ್ನಡಿಗರು ಈಗಾಗಲೇ ರೋಸಿ ಹೋಗಿದ್ದಾರೆ. ಅವರ ತಾಳ್ಮೆಯನ್ನು ಪರೀಕ್ಷಿಸಲು ಕೇಂದ್ರ ಸರ್ಕಾರ ಹೋಗಬಾರದು ಎಂದು ಕಿಡಿಕಾರಿದ್ದಾರೆ.

 

Key words:  Karnataka-tablo- refuse- CM Siddaramaiah -against –Central govt

Tags :
againstcentral govtKarnataka-tablo- refuse- CM Siddaramaiah
Next Article