For the best experience, open
https://m.justkannada.in
on your mobile browser.

ಕೆಎಎಸ್ ಅಧಿಕಾರಿಯ ಪತ್ನಿ ಆತ್ಮಹತ್ಯೆಗೆ ಶರಣು.

03:25 PM May 11, 2024 IST | prashanth
ಕೆಎಎಸ್ ಅಧಿಕಾರಿಯ ಪತ್ನಿ ಆತ್ಮಹತ್ಯೆಗೆ ಶರಣು

ಬೆಂಗಳೂರು, ಮೇ 11,2024 (www.justkannada.in):  ಕೆಎ​ಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

​ಸಂಜಯ್​ನಗರದಲ್ಲಿ ಈ ಘಟನೆ ನಡೆದಿದೆ.  ಚೈತ್ರಾಗೌಡ ಮೃತಪಟ್ಟ ಮಹಿಳೆ. ಚೈತ್ರಗೌಡ  ವೃತ್ತಿಯಲ್ಲಿ ವಕೀಲರಾಗಿದ್ದರು. ಮನೆಯಲ್ಲಿ ಫ್ಯಾನ್ ​​ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆ ಆಗಿದೆ. ಚೈತ್ರಗೌಡ ಪತಿ ಶಿವಕುಮಾರ್ ಕೆಎಎಸ್ ಅಧಿಕಾರಿಯಾಗಿದ್ದು, ಕೆಐಎಡಿಬಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇನ್ನು  ಮನೆಯಲ್ಲಿ 3 ತಿಂಗಳ ಹಿಂದೆ ಬರೆದಿಟ್ಟಿದ್ದ ನೋಟ್​ ಪತ್ತೆ ಆಗಿದೆ. ಇದೇ ಮಾ.11ರಂದು ಬರೆದಿದ್ದ ಡೆತ್​​ ನೋಟ್ ಪತ್ತೆಯಾಗಿದ್ದು, ನನ್ನ ಗಂಡ ಒಳ್ಳೆಯವರು, ಜೀವನ ಎಂಜಾಯ್ ಮಾಡಿ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಡಿಪ್ರೆಶನ್​​ನಿಂದ ಬಳಲುತ್ತಿದ್ದೇನೆ. ಅದರಿಂದ ಹೊರ ಬರಲು ಸಾಕಷ್ಟು ಪ್ರಯತ್ನಿಸಿದೆ ಆಗಲಿಲ್ಲ, ಹಾಗಾಗಿ ನನ್ನ ಜೀವನ ಕೊನೆಗೊಳಿಸುತ್ತಿದ್ದೇನೆ. ಮಗು ಚೆನ್ನಾಗಿ ನೋಡಿಕೊಂಡು ಲೈಫ್ ಎಂಜಾಯ್ ಮಾಡಿ. ನಾನು ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು ಅಂತ ಗೊತ್ತಿದೆ. ಆದ್ರೂ ನನ್ನ ಜೀವನ ಅಂತ್ಯ ಮಾಡುತ್ತಿದ್ದೇನೆ ಎಂದು ಮನೆಯಲ್ಲಿ 3 ತಿಂಗಳ ಹಿಂದೆ ಬರೆದಿಟ್ಟಿದ್ದ ನೋಟ್​ ಪತ್ತೆ ಆಗಿದೆ.

ಘಟನಾ ಸ್ಥಳಕ್ಕೆ ಸಂಜಯ್ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Key words: KAS officer, wife ,commits,  suicide.

Tags :

.