ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ತೀರ್ಮಾನ- ಡಿಸಿಎಂ ಡಿಕೆ ಶಿವಕುಮಾರ್
ಮಂಡ್ಯ,ಜುಲೈ, 22, 2024 (www.justkannada.in): ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು ಈ ಹಿನ್ನೆಲೆಯಲ್ಲಿ ಕೆಆರ್ ಎಸ್ ಜಲಾಶಯ ಸೇರಿ ಎಲ್ಲಾ ಜಲಾಶಯಗಳು ಭರ್ತಿಯಾಗುತ್ತಿದೆ. ಈ ಮಧ್ಯೆ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ನಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ಧಾರ್ಮಿಕ ದತ್ತಿ ಇಲಾಖೆ ಕಾವೇರಿ ನೀರಾವರಿ ನಿಗಮದಿಂದ ನಿರ್ಧಾರ ಮಾಡಲಾಗಿದೆ. ತಾಯಿ ಚಾಮುಂಡಿ ಅನುಗ್ರಹದಿಂದ ಕೆಆರ್ ಎಸ್ ಗೆ ಬಾಗಿನ ಅರ್ಪಿಸುವ ಅವಕಾಶ ದೊರೆತಿದೆ. ಕಳೆದ ಬಾರಿ 200ಕ್ಕೂ ಹೆಚ್ಚು ತಾಲ್ಲೂಕುಗಳು ಬರಕ್ಕೆ ತುತ್ತಾಗಿದ್ದವು. ಬರ ಸಂದರ್ಭದಲ್ಲಿ ರೈತರನ್ನ ಕಾಪಾಡುವ ಕೆಲಸ ಮಾಡಿದ್ದೇವೆ ಎಂದರು.
ಈವರೆಗೆ ನಾವು ತಮಿಳುನಾಡಿಗೆ 30 ಟಿಎಂಸಿ ನೀರು ಬಿಟ್ಟಿದ್ದೇವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ 1657 ಕೆರೆಗಳಿವೆ. ಎಲ್ಲಾ ಕೆರೆಗಳನ್ನ ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
Key words: Kaveri Aarti, Ganga Aarti, DCM, DK Shivakumar