ಮಹಿಳೆ ಕಿಡ್ನಾಪ್ ಕೇಸ್: ಭವಾನಿ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್
ನವದೆಹಲಿ,ಜುಲೈ,10,2024 (www.justkannada.in): ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಎಸ್ ಐಟಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಇಂದು ಸುಪ್ರೀಂಕೋರ್ಟ್ ನಲ್ಲಿ ನಡೆಯಿತು.
ಸುಪ್ರೀಂಕೋರ್ಟ್ ನ್ಯಾ. ಸೂರ್ಯಕಾಂತ್, ನ್ಯಾ. ಉಜ್ಜಲ್ ಭುಯಾನ್ ಪೀಠದಲ್ಲಿ ಎಸ್ ಐಟಿ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು. ನ್ಯಾಯಪೀಠ ಭವಾನ ರೇವಣ್ಣಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನ ಮುಂದಿನ ವಾರಕ್ಕೆ ಮುಂದೂಡಿಕೆ ಮಾಡಿದೆ.
ಕೆ.ಆರ್ ನಗರದ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಬಂಧನವಾಗಿತ್ತು. ಭವಾನಿ ರೇವಣ್ಣ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.
ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನ ಪ್ರಶ್ನಿಸಿ ಎಸ್ ಐಟಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಎಸ್ ಐಟಿ ಪರ ಕಪಿಲ್ ಸಿಬಲ್ ವಾದ ಮಂಡಿಸಿದರು.
Key words: Kidnapping Case, Supreme Court, Notice, Bhavani Revanna