ಕೆ.ಎನ್ ರಾಜಣ್ಣ ಹೇಳಿಕೆ ವಿಚಾರ: ಅದೃಷ್ಟ ಕೂಡಿ ಬರಲಿ ಅಂತ ನಾನು ಆಸೆ ಪಡುತ್ತೇನೆ- ಸಚಿವ ಡಾ.ಜಿ.ಪರಮೇಶ್ವರ್.
03:14 PM Nov 03, 2023 IST
|
prashanth
ತುಮಕೂರು,ನವೆಂಬರ್,3,2023(www.justkannada.in): ಡಾ.ಜಿ.ಪರಮೇಶ್ವರ್ ಗೆ ಸಿಎಂ ಆಗಲು ಅವಕಾಶವಿದೆ ಎಂಬ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ಕುರಿತು ಗೃಹ ಸಚಿವ ಡಾಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿದರೆ ಗೃಹ ಸಚಿವ ಜಿ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದು ಕೆ.ಎನ್ ರಾಜಣ್ಣ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ನಾನು ಕೆ ಎನ್ ರಾಜಣ್ಣ ಅವರಿಗೆ ಆಭಾರಿಯಾಗಿದ್ದೇನೆ. ಅದೃಷ್ಟ ಕೂಡಿ ಬರಲಿ ಅಂತ ನಾನು ಆಸೆ ಪಡುತ್ತೇನೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಚಿವರಾಗಲಿ ಶಾಸಕರಾಗಲಿ ಯಾವುದೇ ನಾಯಕರಿದ್ದರೂ ಬಹಿರಂಗ ಹೇಳಿಕೆ ನೀಡಬಾರದೆಂದು ಎಚ್ಚರಿಕೆ ನೀಡಿದ್ದರು.
Key words: KN Rajanna- statement: - good luck – minister-Dr. G. Parameshwar.
Next Article