For the best experience, open
https://m.justkannada.in
on your mobile browser.

KPSC ತಿದ್ದುಪಡಿ ಅಧಿಸೂಚನೆ : ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆ.

06:53 PM Sep 20, 2024 IST | mahesh
kpsc ತಿದ್ದುಪಡಿ ಅಧಿಸೂಚನೆ   ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆ

ಬೆಂಗಳೂರು, ಸೆ,20,2024: (www.justkannada.in news) ಲೋಕಸೇವಾ ಆಯೋಗವು 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ 'ಪಂಚಾಯತಿ ಅಭಿವೃದ್ಧಿ ಅಧಿಕಾರಿ* ನೇಮಕ ಸಂಬಂಧ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ.

ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್. ಕೆ ಪ್ರಕಟಣೆ ಹೊರಡಿಸಿದ್ದು ವಿವರ ಹೀಗಿದೆ..

ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ-97 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಲ್ಲೇಖಿತ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ಕ್ರಮ ಸಂಖ್ಯೆ:13ರಲ್ಲಿ ಗರಿಷ್ಠ ವಯೋಮಿತಿಯನ್ನು 'ಸಾಮಾನ್ಯ ಅರ್ಹತೆ, 35 ವರ್ಷಗಳು, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ- 38 ವರ್ಷಗಳು ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1- 40 ವರ್ಷಗಳು" ಎಂದು ನಿಗದಿಪಡಿಸಲಾಗಿತ್ತು.

ಪ್ರಸ್ತುತ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೆನೆನಿ 2024, ದಿನಾಂಕ:10.09.2024ರಲ್ಲಿ, ಈ ಕೆಳಕಂಡಂತೆ ಆದೇಶ ಹೊರಡಿಸಲಾಗಿರುತ್ತದೆ.

"ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್-ಸಿ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ. ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ.

ಮೇಲ್ಕಂಡ ಸರ್ಕಾರದ ಆದೇಶದನ್ವಯ ಸದರಿ ಹುದ್ದೆಗಳಿಗೆ ನಿಗದಿಪಡಿಸಲಾಗಿದ್ದ ವಯೋಮಿತಿಯನ್ನು ಕೆಳಕಂಡಂತೆ ಮಾರ್ಪಾಡು ಮಾಡಲಾಗಿದೆ.

ವಯೋಮಿತಿ:

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ:03.10.2024ಕ್ಕೆ ಆಯಾ ಮೀಸಲಾತಿಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

ವಯೋಮಿತಿ, ವಯಸ್ಸು:  ಸಾಮಾನ್ಯ ಅರ್ಹತೆ-ಗರಿಷ್ಠ ಕನಿಷ್ಠ-18 ವರ್ಷಗಳು ಗರಿಷ್ಠ 38 ವರ್ಷಗಳು,  ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ - ಗರಿಷ್ಠ41 ವರ್ಷಗಳು ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1- ಗರಿಷ್ಠ 43 ವರ್ಷಗಳು.

ಸರ್ಕಾರದ ಮೇಲ್ಕಂಡ ಆದೇಶದ ಹಿನ್ನೆಲೆಯಲ್ಲಿ ಗ್ರೂಪ್-ಸಿ ವೃಂದದ 'ಪಂಚಾಯತಿ ಅಭಿವೃದ್ಧಿ ಅಧಿಕಾರಿ' ಹುದ್ದೆಗಳಿಗೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ (one time measure) ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಅರ್ಹ ಅಭ್ಯರ್ಥಿಗಳು ದಿನಾಂಕ:18.09.2024 ರಿಂದ 03.10.2024ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಕಲ್ಪಿಸಲಾಗಿರುತ್ತದೆ.

ವಿಶೇಷ ಸೂಚನೆ:-

  1. ಈ ಹಿಂದೆ ತಾಂತ್ರಿಕ ಕಾರಣದಿಂದ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
  2. ವಯೋಮಿತಿಯನ್ನು ಹೊರತುಪಡಿಸಿ ಉಳಿದಂತೆ, ಆಯೋಗದ ಅಧಿಸೂಚನೆ (2)598/2023-24/24, 2:15.03.20240 3 ಮಾಹಿತಿ/ವಿವರಗಳನ್ನು ಯಥಾವತ್ತಾಗಿ ಅನ್ವಯಿಸಿಕೊಳ್ಳತಕ್ಕದ್ದು ಹಾಗೂ ಹೆಚ್ಚಿನ ವಿವರಗಳಿಗಾಗಿ ಸದರಿ ಅಧಿಸೂಚನೆಯನ್ನು ಓದಿಕೊಳ್ಳತಕ್ಕದ್ದು.
  3. ಈಗಾಗಲೇ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಿರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಪರೀಕ್ಷಾ ದಿನಾಂಕಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ.

key words: KPSC, Amendment Notification, Relaxation of 03 years, in upper age limit.

Tags :

.