For the best experience, open
https://m.justkannada.in
on your mobile browser.

KPSC EXAMS: ಕಾನ್ ಸ್ಟಬಲ್ ಹುದ್ದೆಗಳ ವಯೋಮಿತಿ ಹೆಚ್ಚಳ ಬಗ್ಗೆ ಒಂದು ಬಾರಿಯ ತೀರ್ಮಾನ : ಸಿಎಂ ಸಿದ್ದರಾಮಯ್ಯ

05:50 PM Sep 20, 2024 IST | mahesh
kpsc exams  ಕಾನ್ ಸ್ಟಬಲ್ ಹುದ್ದೆಗಳ ವಯೋಮಿತಿ ಹೆಚ್ಚಳ ಬಗ್ಗೆ ಒಂದು ಬಾರಿಯ ತೀರ್ಮಾನ   ಸಿಎಂ ಸಿದ್ದರಾಮಯ್ಯ

Chief Minister Siddaramaiah clarified that the Karnataka Public Service Commission (KPSC) has already instructed to conduct a re-examination for the recruitment of gazetted probationary posts conducted earlier.

ಮೈಸೂರು, ಸಪ್ಟೆಂಬರ್ 20,2024: (www.justkannada.in news)  ಕರ್ನಾಟಕ ಲೋಕಸೇವಾ ಆಯೋಗ ಈ ಹಿಂದೆ ನಡೆಸಿದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕ ಸಂಬಂಧ ಮರು ಪರೀಕ್ಷೆ ನಡೆಸುವಂತೆ ಈಗಾಗಲೇ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಇಂದು  ಮೈಸೂರಿನ ವಿಮಾನ ನಿಲ್ದಾಣದಲ್ಲಿ  ಮಾಧ್ಯಮ ದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಹೇಳಿದಿಷ್ಟು..

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ.  ಕಾನ್ ಸ್ಟಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಬಗ್ಗೆ ಮಾತನಾಡಿ,  ಈ ಕುರಿತು ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ. ಈ ಬಗ್ಗೆ ಆದಷ್ಟು ಶೀಘ್ರ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಆಶ್ವಾಸನೆ ನೀಡಿದರು.

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಘಟನೆ ಹಿನ್ನೆಲೆ:

ಕಳೆದ ತಿಂಗಳಾಂತ್ಯದಲ್ಲಿ ನಡೆದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಎಡವಟ್ಟು ಹಿನ್ನೆಲೆಯಲ್ಲಿ ಮುಂದಿನ 2 ತಿಂಗಳಲ್ಲಿ ಮರು ಪರೀಕ್ಷೆ ನಡೆಸವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು.

ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಇಂಗ್ಲಿಷ್ ಪ್ರಶ್ನೆಗಳನ್ನು ಕನ್ನಡಕ್ಕೆ ಭಾಷಾಂತರ ಮಾಡುವ ಸಂದರ್ಭದಲ್ಲಿ ಎಡವಟ್ಟಾಗಿತ್ತು. ಗ್ರಾಮೀಣಾ ಭಾಗದ ಅಭ್ಯರ್ಥಿಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಬಗ್ಗೆ ಕೆಪಿಎಸ್‌ಸಿ ಆಯೋಗ ಸ್ಪಷ್ಟನೆ ನೀಡುವ ಮೂಲಕ ತೇಪೆ ಹಚ್ಚಲು ಮುಂದಾಗಿತ್ತಾದರೂ, ಸಿಎಂ ಸಿದ್ದರಾಮಯ್ಯ ಮರು ಪರೀಕ್ಷೆಗೆ ಸೂಚನೆ ನೀಡಿದ್ದರು.

ಕರ್ನಾಟಕ ಲೋಕಸೇವಾ ಅಯೋಗ( ಕೆಪಿಎಸ್‌ಸಿ) ಗೆಜೆಟೆಡ‌ ಪ್ರೊಬೆಷನರಿ 384 ಹುದ್ದೆಗಳ ನೇಮಕಾತಿಗೆ ನಡೆದ ಪೂರ್ವಭಾವಿ ಪರೀಕ್ಷೆಯ ಎರಡನೇ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡದಲ್ಲಿ ಮುದ್ರಿತವಾದ ಪ್ರಶ್ನೆಗಳು ವಿವಾದಕ್ಕೆ ಕಾರಣವಾಗಿದ್ದವು. ಇಂಗ್ಲಿಷ್ ಪ್ರಶ್ನೆಗಳನ್ನು ಕೃತಕ ಬುದ್ಧಿಮತ್ತೆ ( ಎಐ) ತಂತ್ರಜ್ಞಾನದ ಮೂಲಕ ಭಾಷಾಂತರ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಭಾಷಾಂತರ ಪ್ರಶ್ನೆಗಳ ಅರ್ಥ ಮಾಡಿಕೊಳ್ಳಲು ಅಸಾಧ್ಯವಾಗಿದ್ದವು.

key words: KPSC EXAMS, One-time decision, on increasing, age limit ,for constable posts:, CM Siddaramaiah

SUMMARY:

Chief Minister Siddaramaiah clarified that the Karnataka Public Service Commission (KPSC) has already instructed to conduct a re-examination for the recruitment of gazetted probationary posts conducted earlier.

Tags :

.