KRS FLOOD WARNING: ಪ್ರವಾಹನ ಮುನ್ಸೂಚನೆ ಹಿನ್ನೆಲೆ, ಸಮರೋಪಾದಿಯಲ್ಲಿ ಸಿದ್ಧತೆಗೆ ಸೂಚಿಸಿದ ಜಿಲ್ಲಾಧಿಕಾರಿ
ಮಂಡ್ಯ.ಜು.19,2024: (www.justkannada.in news) ಕೆ.ಆರ್.ಎಸ್ ಜಲಾಶಯ ಭರ್ತಿಯಾಗುತ್ತಿದ್ದು, ಜಲಾಶಯದ ಮಟ್ಟ 120 ಅಡಿ ದಾಟಿದ ನಂತರ ನದಿಗೆ ನೀರು ಬಿಡುಗಡೆ ಮಾಡಲಾಗುವುದು. ಈ ಸಂದರ್ಭದಲ್ಲಿ ಯಾವುದೇ ಹಾನಿಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದಿಷ್ಟು..
ಕೆ.ಆರ್.ಎಸ್ ನಿಂದ ಒಂದು ಲಕ್ಷ ಕ್ಕಿಂತ ಹೆಚ್ಚಿನ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ ಸಂದರ್ಭದಲ್ಲಿ ನದಿ ಪಾತ್ರದಲ್ಲಿರುವ ಶ್ರೀರಂಗಪಟ್ಟಣ ತಾಲ್ಲೂಕಿನ- 53, ಪಾಂಡವಪುರ- 15, ಮಳವಳ್ಳಿ- 21 ಹಾಗೂ ಹೇಮಾವತಿ ಜಲಾಶಯಕ್ಕೆ ಸಂಬಂಧಿಸಿದಂತೆ ಕೆ.ಆರ್.ಪೇಟೆ - 3 ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ ತೊಂದರೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ಗ್ರಾಮಗಳಿಗೆ ಖುದ್ದು ಅಧಿಕಾರಿಗಳು ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲಿಸಬೇಕು ಎಂದರು.
ಜಿಲ್ಲಾ ಮಟ್ಟದ ಜೊತೆಗೆ ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಟಾಸ್ಕ್ ಫೋಸ್೯ ಸಮಿತಿ ರಚಿಸಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಗ್ರಾಮ ಪಂಚಾಯತಿಯ ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕಾಲ ಕಾಲಕ್ಕೆ ಬಿಡುಗಡೆಯಾಗುವ ನೀರು, ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ತಮಗಳ ಬಗ್ಗೆ ಜನರಿಗೆ ಮಾಹಿತಿ ನೀಡಿ ಎಂದರು.
ಕಂಟ್ರೋಲ್ ರೂಮ್ ಸ್ಥಾಪನೆ
ಜಿಲ್ಲೆಯಲ್ಲಿ ಯಾವುದೇ ಸ್ಥಳ ಅಥವಾ ಮನೆಗಳು ಪ್ರವಾಹಕ್ಕೆ ಸಿಲುಕಿದರೆ ರಕ್ಷಣೆಗಾಗಿ ಎಲ್ಲಾ ತಾಲ್ಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಮ್ ಅನ್ನು ಸ್ಥಾಪಿಸಬೇಕು. ಮಳೆ ಹಾಗೂ ನದಿಗಳಿಂದ ಯಾವುದೇ ಅಪಾಯಗಳು ಉಂಟಾದಾಗ ಕೂಡಲೇ ಕಂಟ್ರೋಲ್ ರೂಮ್ ಗೆ ಮಾಹಿತಿ ಸಲ್ಲಿಸುವುದರಿಂದ ಸಾರ್ವಜನಿಕರನ್ನು ಸಮಸ್ಯೆಯಿಂದ ಪಾರು ಮಾಡಬಹುದು. ಚೆಸ್ಕಾಂ ಹಾಗೂ ಕಾವೇರಿ ನೀರಾವರಿ ನಿಗಮದಿಂದಲೂ ಸಹ ಪ್ರತ್ಯೇಕ ಕಂಟ್ರೋಲ್ ರೂಂ ಸ್ಥಾಪನೆ ಮಾಡಬೇಕು ಎಂದರು.
ನೋಡಲ್ ಅಧಿಕಾರಿ ನೇಮಕ :
ಪ್ರತಿ ತಾಲ್ಲೂಕಿಗೂ ಒಬ್ಬ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ತಾಲ್ಲೂಕು ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಪೋರ್ಸ್ ಸಮಿತಿಯನ್ನು ರಚಿಸಲಾಗಿದೆ. 3 ಹಂತಗಳಲ್ಲಿಯೂ ತಂಡಗಳನ್ನು ರಚಿಸಿಕೊಂಡು ಸಮನ್ವಯತೆಯಿಂದ ಸಹಕಾರ ಮನೋಭಾವದಿಂದ ಯಾವುದೇ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿ ಎಂದರು.
ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳು ಹಾಗೂ ಕೃಷಿ ಬೆಳೆಗಳು ಮುಳುಗಡೆಯಾಗುವುದೋ ಅಂತಹ ಪ್ರದೇಶಗಳಿಗೆ ತಾಲ್ಲೂಕಿನ ಇಒಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ಎಚ್ಚರಿಕಾ ಸೂಚನಾ ಫಲಕಗಳನ್ನು ಅಳವಡಿಸಬೇಕು. ಸಾರ್ವಜನಿಕರಲ್ಲಿ ಕರ ಪತ್ರ, ಟಾಮ್ ಟಾಮ್ ವಾಹನಗಳಲ್ಲಿ ವ್ಯಾಪಕ ಪ್ರಚಾರ ಮಾಡುವ ಮೂಲಕ ಜಾಗೃತಿ ಮೂಡಿಸಬೇಕು ಎಂದರು.
ಕೆ ಆರ್ ಎಸ್ ಅಣೆಕಟ್ಟಿನ ನೀರಿನ ಮಟ್ಟ, ಒಳ ಹರಿವು, ಹೊರ ಹರಿವು ಎಷ್ಟಿದೆ ಎಂಬುದನ್ನು ಸಾರ್ವಜನಿಕರಿಗೆ ತಿಳಿಸಿ. ನದಿ ಅಕ್ಕ ಪಕ್ಕ ಇರುವಂತಹ ಗ್ರಾಮಗಳಿಗೆ ಮುನ್ನೆಚ್ಚರಿಕ ಕ್ರಮಗಳನ್ನು ಅನುಸರಿಸಲು ತಿಳಿಸುವಂತಹದ್ದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು.
ಯಾವುದೇ ಅಪಾಯಗಳು ಸಂಭವಿಸುವುದಕ್ಕೂ ಮುನ್ನ ಮುಂಜಾಗ್ರತಾ ಕ್ರಮವಾಗಿ ಅವಶ್ಯಕ ಸಿದ್ದತೆಯನ್ನು ಮಾಡಿಟ್ಟುಕೊಳ್ಳುವುದು ಸೂಕ್ತ. ಅಗ್ನಿಶಾಮಕ ಇಲಾಖೆ, ಪೊಲೀಸ್ ಇಲಾಖೆಗಳು ಸ್ವಯಂ ಸೇವಕರು, ಈಜು ಪರಿಣತರ ಪಟ್ಟಿ, ಜೆ.ಸಿ.ಬಿ ಹಾಗೂ ಬೋಟ್ ವ್ಯವಸ್ಥೆಯನ್ನು ಮಾಡಿಕೊಂಡಿರಬೇಕು ಎಂದು ತಿಳಿಸಿದರು.
ಕಾಳಜಿ ಕೇಂದ್ರ:
ಜಿಲ್ಲೆಯಲ್ಲಿ ಇಲ್ಲಿಯವರೆಗೂ ಜಲಾಶಯಗಳಿಂದ ಹೆಚ್ಚುವರಿ ನೀರನ್ನು ನಾಲೆಗಳಿಗೆ ಬಿಟ್ಟಾಗ ಯಾವುದೇ ಕುಟುಂಬದ ಸ್ಥಳಾಂತರ ಘಟನೆಗಳು ನಡೆದಿಲ್ಲ. ಒಂದು ವೇಳೆ ತೀವ್ರ ಪ್ರವಾಹದಿಂದಾಗಿ ಯಾವುದೇ ಕುಟುಂಬವನ್ನು ಸ್ಥಳಾಂತರಿಸಬೇಕಾದರೆ ಮುನ್ನೆಚ್ಚರಿಕಾ ಕ್ರಮವಾಗಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಎಂದರು.
ಸಾಕಷ್ಟು ಕಡೆ ತೀವ್ರ ಮಳೆ ಹಾಗೂ ನದಿ ನೀರಿನಿಂದ ರಸ್ತೆಗಳು ಜಲಾವೃತವಾದರೆ ಸಂಚಾರ ನಿರ್ಬಂಧ ಮಾಡಿ, ಪರ್ಯಾಯ ರಸ್ತೆಯ ವ್ಯವಸ್ಥೆ ಮಾಡಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದರು
ಜಲಾಶಯದಿಂದ ಕೃಷಿ ಭೂಮಿಗಳು ಪ್ರವಾಹದಿಂದ ಜಲಾವೃತವಾಗಿ ಬೆಳೆ ನಾಶವಾದರೆ ಕಾನೂನು ಬದ್ಧವಾಗಿ ಪರಿಹಾರ ನೀಡಲು ಅನುಕೂಲವಾಗುವಂತೆ ಮುಂಜಾಗ್ರತಾ ಕ್ರಮವಾಗಿ ಕೃಷಿ ಅಧಿಕಾರಿಗಳು ಕೃಷಿ ಭೂಮಿಯನ್ನು ಗುರುತಿಸಿ ಭಾವಚಿತ್ರಗಳನ್ನು ತೆಗೆದುಕೊಳ್ಳಬೇಕು. ಮುಳುಗಡೆಯಾದ ನಂತರ ಬೆಳೆಯ ಬಗ್ಗೆ ದಾಖಲೆ ಸಿಗುವುದಿಲ್ಲ ಹಾಗೂ ಪರಿಹಾರ ಒದಗಿಸುವುದು ಕಷ್ಟಕರ ವಾಗುತ್ತದೆ ಎಂದರು.
ಜಿಲ್ಲೆಯ ಜನ, ಪ್ರವಾಸಿಗರು ಹಾಗೂ ಅಣೆಕಟ್ಟಿನ ಸುರಕ್ಷತೆ ಮುಖ್ಯವಾಗಿದೆ. ಅಪಾಯದ ಸ್ಥಳಗಳಲ್ಲಿ, ಸೆಲ್ಫಿ ಪಾಯಿಂಟ್, ನದಿ ಪಾತ್ರದಲ್ಲಿ ಇರುವ ದೇವಸ್ಥಾನ, ಗಗನಚುಕ್ಕಿ ಜಲಪಾತ, ಮುತ್ತತ್ತಿ, ಮುಂತಾದ ಸ್ಥಳಗಳಲ್ಲಿ ಎಚ್ಚರಿಕಾ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿ. ಅವಶ್ಯಕವಿರುವ ಕಡೆ ಹೋಮ್ ಗಾರ್ಡ್ ವ್ಯವಸ್ಥೆ ಮಾಡಿ. ನದಿ ಪಾತ್ರದಲ್ಲಿರುವ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ಭೇಟಿ ಅವಶ್ಯಕವಿರುವ ಕಡೆ ಅವರಿಗೆ ಸೂಕ್ತ ಮಾಹಿತಿಗಳನ್ನು ರವಾನಿಸಿ ಎಂದರು.
key words: KRS Dam Filling, Deputy Commissioner, Instructs Officials, to Be Prepared, on a War footing, In the Wake of, Flood Forecast
SUMMARY:
FLOOD WARNING MESSAGES
As there is heavy rain in the catchment area of Cauvery River, Water level in K.R.S. Reservoir is raising to its full storage level, there is likely to releasing of surplus water, this may be increased at any moment. Hence, all the public lying on both banks of the river and on the low lying area of river Cauvery are here by cautioned to move to safer place and take all precautionary measures for safety and security to their lives and property.
Kang Executive Engineer