KSOU: ಆ.31 ರಂದು ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ ಶಿಬಿರ ಉದ್ಘಾಟನೆ
ಮೈಸೂರು,ಆಗಸ್ಟ್,28,2024 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ನಡೆಸುವ 45 ದಿನಗಳ ತರಬೇತಿ ಶಿಬಿರದ ಉದ್ಘಾಟನೆ ಮತ್ತು ಶುಭ ಹಾರೈಸುವ ಕಾರ್ಯಕ್ರಮ ಆಗಸ್ಟ್ 31 ರಂದು ನಡೆಯಲಿದೆ.
ಆಗಸ್ಟ್ 31ರ ಶನಿವಾರ ಬೆಳಗ್ಗೆ 11:00 ಗಂಟೆಗೆ ಕರಾಮುವಿ ಅವರಣದಲ್ಲಿರುವ ಕಾವೇರಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ ಎನ್. ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾನಿಲಯದ ಪ್ರೊ. ಜಿ.ಆರ್. ಅಂಗಡಿ ಭಾಗವಹಿಸುವರು. ತರಬೇತಿ ಶಿಬಿರಾರ್ಥಿಗಳಿಗೆ ಶುಭಹಾರೈಸಿ, ಕೆ-ಸೆಟ್/ಯುಜಿಸಿ-ನೆಟ್ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಕುರಿತು ಮುಖ್ಯ ಭಾಷಣ ಮಾಡುವರು.
ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭಕೋರುವರು. ಕುಲಸಚಿವ ಪ್ರೊ.ಕೆ.ಬಿ. ಪ್ರವೀಣ ಉಪಸ್ಥಿತರಿರುವರು. ಆಸಕ್ತರು ಈಗಲೂ ತರಬೇತಿಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.
Key words: KSOU, coaching camp, K-SET, UGC-NET exams