For the best experience, open
https://m.justkannada.in
on your mobile browser.

ಮೃತ ಯುವತಿ ನೇಹಾ ನಿವಾಸಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ.

12:03 PM Apr 20, 2024 IST | prashanth
ಮೃತ ಯುವತಿ ನೇಹಾ ನಿವಾಸಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ  ಕುಟುಂಬಸ್ಥರಿಗೆ ಸಾಂತ್ವನ

ಹುಬ್ಬಳ್ಳಿ,ಏಪ್ರಿಲ್,20,2024 (www.justkannada.in): ಹುಬ್ಬಳ್ಳಿಯ ಕಾಲೇಜೊಂದರಲ್ಲಿ ಪಾಗಲ್ ಪ್ರೇಮಿ ಫಯಾಜ್ ನಿಂದ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ  ಹೆಬ್ಬಾಳ್ಕರ್ ಇಂದು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಹುಬ್ಬಳ್ಳಿ ಬಿಡ್ನಾಳ್ ಬಡವಾಣೆಯಲ್ಲಿರುವ ನೇಹಾ ನಿವಾಸಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದರು. ಈ ವೇಳೆ ನೇಹಾ ತಂದೆ ನಿರಂಜನ್ ಹಿರೇಮಠ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮುಂದೆ ಕಣ್ಣೀರಿಟ್ಟರು.

ಈ ವೇಳೆ ನೇಹಾ ಪೋಷಕರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ನೇಹಾ ಕುಟುಂಬ‍ಕ್ಕೆ ನ್ಯಾಯ ಕೊಡಿಸುತ್ತೇವೆ. ಕುಟುಂಬಸ್ಥರ ಜೊತೆ ನಾವು ನಿಲ್ಲುತ್ತೇವೆ ಎಂದು ಹೇಳಿದರು.

Key words: Lakshmi Hebbalkar, visits, Neha, residence

Tags :

.