For the best experience, open
https://m.justkannada.in
on your mobile browser.

ದುಡಿಯುವ ವರ್ಗಗಳಿಗೆ ಚಿಕಿತ್ಸೆ ಹೊರೆ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ –ಸಿಎಂ ಸಿದ್ದರಾಮಯ್ಯ

04:18 PM Dec 22, 2023 IST | prashanth
ದುಡಿಯುವ ವರ್ಗಗಳಿಗೆ ಚಿಕಿತ್ಸೆ ಹೊರೆ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ –ಸಿಎಂ ಸಿದ್ದರಾಮಯ್ಯ

ಮೈಸೂರು ಡಿಸೆಂಬರ್, 22,2023(www.justkannada.in):  ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಫೆರಿಫೆರಲ್ ಕ್ಯಾನ್ಸರ್ ಕೇಂದ್ರದ ಕಟ್ಟಡದ ಶಂಕುಸ್ಥಾಪನೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯ ಬಾಲಕಿಯರ ವಿದ್ಯಾರ್ಥಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಮೈಸೂರಿಗೆ ಜಿಲ್ಲಾ ಆಸ್ಪತ್ರೆ, ಟ್ರಾಮಾ ಸೆಂಟರ್, ಕಿದ್ವಾಯಿ ಆಸ್ಪತ್ರೆ ಕೊಟ್ಟಿದ್ದು ನಾನೇ. ಈಗಾಗಲೇ 40 ಕೋಟಿ ಕೂಡ ಕೊಟ್ಟಿದ್ದೇವೆ. ಇನ್ನೂ 50 ಕೋಟಿ ಕೊಡ್ತೀವಿ. ನೆಫ್ರೋಲಜಿ ಕೇಂದ್ರ ಬೇಕು ಎನ್ನುವ ಬೇಡಿಕೆಯೂ ಇದೆ. ಅದನ್ನೂ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ಡಾ.ಯತೀಂದ್ರ ಅವರ ಕೋರಿಕೆಯಂತೆ ಮೈಸೂರಿನಲ್ಲಿ ಬೋನ್ ನ್ಯಾರೋ ಚಿಕಿತ್ಸಾ ಸೌಲಭ್ಯ ಒದಗಿಸುತ್ತೇವೆ ಎಂದರು.

ಬೆಂಗಳೂರಿನ ನಂತರ ವೇಗವಾಗಿ ಬೆಳೆಯುತ್ತಿರುವ ನಗರ ಮೈಸೂರು. ಹೀಗಾಗಿ ಅಗತ್ಯ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನೂ ಮೈಸೂರಿಗೆ ಒದಗಿಸಬೇಕಾಗಿದ್ದು ಇದಕ್ಕೆ ನಾನು ಬದ್ದವಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬಡವರಿಗೆ, ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗಬಾರದು. ಉಚಿತ ಅಥವಾ ಕಡಿಮೆ ಖರ್ಚಿನಲ್ಲಿ ಇವರಿಗೆ ಆರೋಗ್ಯ, ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ. ನಮ್ಮ ಸರ್ಕಾರ ಇರುವಾಗ ಮೈಸೂರು ನಗರಕ್ಕೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸುತ್ತೇವೆ. ಪಾರಂಪರಿಕ ನಗರದ ಹೆಮ್ಮೆಯನ್ನು ನಾವು ಉಳಿಸುತ್ತೇವೆ. ಮೈಸೂರು ಜಿಲ್ಲೆಯ ಜನರ ಋಣ ತೀರಿಸಲು ನಾವು ಬದ್ಧರಾಗಿದ್ದೇವೆ ಎಂದರು.

ಜಯದೇವ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಸಿಗುತ್ತದೆ ಅಂತ ಕೇಳಿದ್ದೇನೆ. ನಾನು ಯಾವತ್ತೂ ಅಲ್ಲಿಗೆ ಹೋಗಿಲ್ಲ. ಜಯದೇವ ಆಸ್ಪತ್ರೆಯಲ್ಲಿ ಸಿಗುವ ಒಳ್ಳೆಯ ಚಿಕಿತ್ಸೆ ವ್ಯವಸ್ಥೆ ಬೇರೆ ಸರ್ಕಾರಿ ಆಸ್ಪತ್ರೆಯಲ್ಲಿ ಯಾಕೆ ಸಾಧ್ಯವಿಲ್ಲ ? ನಾನು ಸಿಎಂ ಆಗುವವರೆಗೂ ಮೈಸೂರಲ್ಲಿ ಒಂದು ಜಿಲ್ಲಾಸ್ಪತ್ರೆ ಇರಲಿಲ್ಲ. ಹಿಂದಿನ ಸರ್ಕಾರ ಕಿದ್ವಾಯಿ ಮಾಡಿರಬಹುದು. ಆದರೆ ದುಡ್ಡು ಕೊಡಲಿಲ್ಲ. ನಾನು ದುಡ್ಡು ಕೊಟ್ಟಿದ್ದೇನೆ ಎಂದರು.

ಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಆರಂಭಿಸಿದ್ದು ನಾನು. ಹಾರ್ಟ್, ಲೀವರ್, ಕಿಡ್ನಿ ಎಲ್ಲವೂ ಟಾರ್ನ್ಸ್ಫರ್ ಮಾಡುತ್ತಾರೆ.  ಉಳಿದಿರೋದು ಬ್ರೈನ್ ಮಾತ್ರ ಎಂದು ನಕ್ಕ  ಸಿಎಂ ಸಿದ್ದರಾಮಯ್ಯ, ವೈದ್ಯರಿಗೆ ಮನುಷ್ಯತ್ವ ಇರಬೇಕು. ಮನುಷ್ಯತ್ವ ಇಟ್ಟು ಕೊಂಡು ಕೆಲಸ ಮಾಡಬೇಕು. ನಮ್ಮ ಸರ್ಕಾರ ಹೋದ ಮೇಲೆ ಮೈಸೂರು ನಗರಕ್ಕೆ ಒಂದೇ ಒಂದು ಕೆಲಸ ಆಗಲಿಲ್ಲ. ಈಗ ಮತ್ತೆ ನಮ್ಮ ಸರಕಾರ ಬಂದಿದೆ.  ಮೈಸೂರಿಗೆ ಎಲ್ಲಾ ಅಭಿವೃದ್ಧಿ ಕೆಲಸ ಮಾಡುತ್ತೇವೆ. ಮೈಸೂರು ನಗರ ಇನ್ನೂ ಕೆಟ್ಟಿಲ್ಲ.  ಇಲ್ಲಿ ನಿವೃತ್ತರು ಉಳಿದು ಕೊಳ್ಳಲು ಇಷ್ಟಪಡುತ್ತಾರೆ. ಈ ಊರಿನಲ್ಲಿ ಎಲ್ಲಾ ವ್ಯವಸ್ಥೆ ಮಾಡುವುದು ನಮ್ಮ ಕರ್ತವ್ಯ ಎಂದರು.

ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಜಿಲ್ಲೆಯ ಶಾಸಕರುಗಳಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡರು, ರವಿಶಂಕರ್, ಅನಿಲ್ ಚಿಕ್ಕಮಾದು,  ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡರು, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

Key words: laying - foundation stone - Cancer Center - Kidwai Memorial Ganthi Institute-mysore-cm siddaramaiah

Tags :

.