For the best experience, open
https://m.justkannada.in
on your mobile browser.

ಬೆಂಗಳೂರಿನಲ್ಲಿ ಆತಂಕ ಸೃಷ್ಠಿಸಿದ್ಧ ಚಿರತೆ ಕೊನೆಗೂ ಸೆರೆ.

04:34 PM Nov 01, 2023 IST | prashanth
ಬೆಂಗಳೂರಿನಲ್ಲಿ ಆತಂಕ ಸೃಷ್ಠಿಸಿದ್ಧ ಚಿರತೆ ಕೊನೆಗೂ ಸೆರೆ

ಬೆಂಗಳೂರು, ನವೆಂಬರ್,1,2023(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವ್ಯಾಪ್ತಿಯ ಕೆಲ ಪ್ರದೇಶಗಳಲ್ಲಿ ಕಳೆದ ಮೂರು ದಿನಗಳಿಂದ ಓಡಾಡಿ ಜನರಲ್ಲಿ ಆತಂಕ ಸೃಷ್ಠಿಸಿದ್ದ  ಚಿರತೆ ಕೊನೆಗೂ ಸೆರೆ ಸಿಕ್ಕಿದೆ.

ಮೂರು ದಿನಗಳ ನಂತರ ಇಂದು  ಚಿರತೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಹಿಡಿದಿದ್ದಾರೆ.  ಕಳೆದ ಎರಡು ದಿನಗಳಲ್ಲಿ ಸಿಲಿಕಾನ್ ಸಿಟಿ ಜನರಲ್ಲಿ ಆತಂಕ ತಂದೊಡ್ಡಿದ್ದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸತತ ಕಾರ್ಯಾಚರಣೆ ನಡೆಸಿದ್ದರು.

ಬೊಮ್ಮನಹಳ್ಳಿಯ ಕೂಡ್ಲುಗೇಟ್ ಬಳಿ ಪಾಳುಬಿದ್ದ ಕಟ್ಟಡದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಚಿರತೆ ಕಟ್ಟಡದಲ್ಲಿ ಇರುವುದನ್ನು ಪತ್ತೆಹಚ್ಚಿದ ಥರ್ಮಲ್ ಡ್ರೋನ್ ಪತ್ತೆ ಮಾಡಿತ್ತು. ಇದರ ಆಧಾರದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಚರಣೆ ನಡೆಸಿ ಕೊನೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಬಳಿಕ ಬಲೆ ಮೂಲಕ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಇದರೊಂದಿಗೆ ಮೈಸೂರು ಲೆಪರ್ಡ್ ಟಾಸ್ಕ್ ಫೋರ್ಸ್ ಕಾರ್ಯಾಚರಣೆ ಯಶಸ್ವಿಯಾಗಿದೆ.

ಸದ್ಯ ಬಲೆಗೆ ಬಿದ್ದ ಚಿರತೆಯನ್ನು ಬೋನ್​ಗೆ ಹಾಕಲಾಗಿದ್ದು, ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ.

Key words:  leopard - anxiety - Bangalore - finally –forest officer

Tags :

.