HomeBreaking NewsLatest NewsPoliticsSportsCrimeCinema

ಲೋಕಸಭೆ ಚುನಾವಣೆಯಲ್ಲಿ ಸೋಲು: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಪ್ರತಿಕ್ರಿಯೆ ಏನು..?

03:02 PM Jun 04, 2024 IST | prashanth

ಬೆಂಗಳೂರು, ಜೂನ್ 4,2024 (www.justkannada.in):  ಲೋಕಸಭೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಭಾರಿ ಕುತೂಹಲ ಮೂಡಿಸಿದ್ದ ರಾಜ್ಯದ ಬೆಂಗಳೂರುಗ್ರಾಮಾಂತರ ಕ್ಷೇತ್ರದಲ್ಲಿ  ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಭರ್ಜರಿ  ಗೆಲುವು ಸಾಧಿಸಿದ್ದು  3ನೇ ಬಾರಿ ಗೆಲುವಿನ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಗೆ  ಮುಖಭಂಗವಾಗಿದೆ.

ತಮ್ಮ ಸೋಲಿನ ಕುರಿತು ಮಾತನಾಡಿರುವ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ. ಮಾದ್ಯಮದ ಮುಖಾಂತರ ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಮತದಾರರು ನೀಡಿರುವ ತಿರ್ಮಾನವನ್ನು ಸ್ವಾಗತಿಸುತ್ತೇನೆ.   ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಧನ್ಯವಾದ ಹೇಳುತ್ತೇನೆ.  ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರ ಜೊತೆ ನಾನು ಜೊತೆಯಾಗಿರುತ್ತೇನೆ. ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದರೆ, ಜನ ಬೇರೆ ತಿರ್ಮಾನ ಕೊಟ್ಟಿದ್ದಾರೆ ಎಂದು ಡಿ.ಕೆ ಸುರೇಶ್ ತಿಳಿಸಿದರು.

Key words:  Lok Sabha, elections, Congress candidate,  DK Suresh

 

Tags :
Defeat - Lok Sabha –elections-Congress candidateDK Suresh ..
Next Article