HomeBreaking NewsLatest NewsPoliticsSportsCrimeCinema

ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ  ದಿಢೀರ್ ದಾಳಿ: ದಾಖಲೆ ಪರಿಶೀಲನೆ.

10:12 AM Oct 30, 2023 IST | prashanth

ಬೆಂಗಳೂರು,ಅಕ್ಟೋಬರ್, 30,2023(www.justkannada.in): ರಾಜ್ಯದ ಹಲವು ಕಡೆಗಳಲ್ಲಿ  ಇಂದು ಬೆಳ್ಳಬೆಳಗ್ಗೆ ಲೋಕಾಯುಕ್ತ ದಾಳಿಯಾಗಿದ್ದು ಅಧಿಕಾರಿಗಳ ನಿವಾಸದಲ್ಲಿ  ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯದ ಬರೋಬ್ಬರಿ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ  ಎಂಬ ಮಾಹಿತಿ ಲಭ್ಯವಾಗಿದೆ. ಆದಾಯಮೀರಿ ಆಸ್ತಿಗಳಿಕೆ ಆರೋಪದ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಕಾಲಕ್ಕೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಕೆ.ಆರ್.​ಪುರಂ ಎಆರ್​ಒಗೆ ಸೇರಿದ ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಮಾಹಿತಿ ಹಿನ್ನೆಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಚಿತ್ರದುರ್ಗದಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ರೇಡ್.

ಚಿತ್ರದುರ್ಗದಲ್ಲಿ(ಇಬ್ಬರು ಅಧಿಕಾರಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಚಿತ್ರದುರ್ಗದ ಹಿರಿಯೂರಿನಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿಯಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರ ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ಮನೆ ಮತ್ತು ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್​ನಲ್ಲಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.

ಇನ್ನು ಹಾಸನದಲ್ಲೂ ಲೋಕಾಯುಕ್ತ ದಾಳಿಯಾಗಿದೆ. ಹಾಸನದಲ್ಲಿ ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ಹೆಚ್ ಇ.ನಾರಾಯಣ ಎಂಬುವವರ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿರುವ ನಾರಾಯಣ ನಿವಾಸ ಹಾಗೂ ಗೊರೂರಿನಲ್ಲಿರುವ ಕಚೇರಿ ಮೇಲೆ ದಾಳಿಯಾಗಿದ್ದು, ದಾಖಲೆ ಪರಿಶೀನಲೆ ನಡೆಸಿದ್ದಾರೆ.

ಹಾವೇರಿಯಲ್ಲಿ ಹಾವೇರಿ ಆರ್ ಎಫ್ ಓ ಪರಮೇಶಪ್ಪ ಪೇರಲನವರ್ ಹಾಗೂ ನ್ಯಾಮತಿ ಆರ್ ಎಫ್ ಒ ಮಾಲತೇಶ್​ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಇನ್ನು ಕಲಬುರಗಿಯಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.‌ ಬೀದರ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಮತ್ತು ದೇವದುರ್ಗದ KBJNL ಇಇ ತಿಪ್ಪಣ್ಣ ಅನ್ನದಾನಿ ಮನೆಗಳ ಮೇಲೆ ದಾಳಿಯಾಗಿದೆ.

Key words: Lokayukta -attacks - state –official

Tags :
Lokayukta -attacks - state –official
Next Article