For the best experience, open
https://m.justkannada.in
on your mobile browser.

ಲೋಕಸಭೆ ಚುನಾವಣೆ: ಬಿಜೆಪಿ ಹೊಸ ದಾಖಲೆ ಬರೆಯಲಿದೆ ಎಂದು ಭರವಸೆ ನೀಡಿದ್ದೇನೆ- ಬಿ.ವೈ ವಿಜಯೇಂದ್ರ.

06:02 PM Feb 09, 2024 IST | prashanth
ಲೋಕಸಭೆ ಚುನಾವಣೆ  ಬಿಜೆಪಿ ಹೊಸ ದಾಖಲೆ ಬರೆಯಲಿದೆ ಎಂದು ಭರವಸೆ ನೀಡಿದ್ದೇನೆ  ಬಿ ವೈ ವಿಜಯೇಂದ್ರ

ನವದೆಹಲಿ,ಫೆಬ್ರವರಿ,9,2024(www.justkannada.in):  ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಂದು ಹೊಸ ದಾಖಲೆ ಬರೆಯಲಿದೆ.  ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ನಾನು ಭರವಸೆ ನೀಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ  ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಲೋಕಸಭೆ ಚುನಾವಣೆ, ವಿಧಾನಪರಿಷತ್ ಚುನಾವಣಾ ಅಭ್ಯರ್ಥಿಗಳ ವಿಚಾರ ಹಾಗೂ ರಾಜ್ಯಸಭಾ ಚುನಾವಣೆ ಕುರಿತು ಚರ್ಚೆ ಮಾಡಿದ್ದೇನೆ. ನಾನು ರಾಜ್ಯಾಧ್ಯಕ್ಷನಾಗಿ ಎಲ್ಲರನ್ನು ಜೊತೆ ಸೇರಿಸಿಕೊಂಡು ಪಕ್ಷವನ್ನು ಮುನ್ನಡೆಸುತ್ತಿರುವ ಕುರಿತು ಜೆ.ಪಿ ನಡ್ಡಾ ಅವರು ಸಂತಸ  ವ್ಯಕ್ತಪಡಿಸಿದ್ದಾರೆ ಎಂದರು.

ಎಲ್ಲ ವಿಚಾರಗಳ ಕುರಿತು ರಾಷ್ಟ್ರೀಯ ಅಧ್ಯಕ್ಷರ ಸಮ್ಮುಖದಲ್ಲಿ ಚರ್ಚೆ ಆಗಿದೆ. ಅಭ್ಯರ್ಥಿಗಳ ಕುರಿತು ಅಂತಿಮವಾಗಿ ವರಿಷ್ಠರು ನಿರ್ಣಯ ಮಾಡಲಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರನ್ನು ಭೇಟಿ ಮಾಡುವ ವೇಳೆ ಅನಿರೀಕ್ಷಿತವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರು ಸಿಕ್ಕಿದ್ದರು. ಹೀಗಾಗಿ ಅವರ ಜೊತೆ ಕುಳಿತು ಚರ್ಚಿಸಿದ್ದೇವೆ. ಅದಕ್ಕೆ ಬಹಳ ವಿಶೇಷತೆ ಅಥವಾ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ನುಡಿದರು.

Key words: LokSabha Elections- promised - BJP - new record - BY Vijayendra.

Tags :

.