For the best experience, open
https://m.justkannada.in
on your mobile browser.

ಟೈಯರ್ ಸಿಡಿದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಲಾರಿ: ಚಾಲಕ ಪಾರು.

10:58 AM May 25, 2024 IST | prashanth
ಟೈಯರ್ ಸಿಡಿದು ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಲಾರಿ  ಚಾಲಕ ಪಾರು

ಮೈಸೂರು,ಮೇ,25,2024 (www.justkannada.in): ಕಾಫಿ ತುಂಬಿದ ಲಾರಿ ಟೈಯರ್ ಸಿಡಿದು ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಸುಟ್ಟು ಕರಕಲಾದ  ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಣೇನೂರು ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.  ಚಾಮರಾಜನಗರದಿಂದ ಹುಲ್ಲಹಳ್ಳಿ ಮಾರ್ಗವಾಗಿ ಕುಶಾಲನಗರಕ್ಕೆ ತೆರಳುತ್ತಿದ್ದ ಲಾರಿ. ಕಣೇನೂರು ಗ್ರಾಮದ ಬಳಿ ಲಾರಿಯ ಮುಂಭಾಗದ ಚಕ್ರ ಸಿಡಿದು ಬೆಂಕಿ ಕಾಣಿಕೊಂಡಿದೆ.

ಬೆಂಕಿ ಕೆನ್ನಾಲಿಗೆಗೆ ಲಾರಿ ಭಸ್ಮವಾಗಿದ್ದು ಲಾರಿಯಲ್ಲಿದ್ದ ಕಾಫಿ ಬೀಜ ಸುಟ್ಟು ಕರಕಲಾಗಿದೆ. ಈ ಮಧ್ಯೆ  ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಲಾರಿಯಿಂದ ಜಿಗಿದು ಪ್ರಾಣಪಾಯದಿಂದ ಪಾರಾಗಿದ್ದಾನೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು,  ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಅಸ್ವಸ್ಥಗೊಂಡು ಬಿದ್ದಿದ್ದ ಲಾರಿ ಚಾಲಕನನ್ನು ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: lorry, burst, tyre, fire, mysore

Tags :

.