HomeBreaking NewsLatest NewsPoliticsSportsCrimeCinema

ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು ಕೊಟ್ಟು ನಾಮ ಇಟ್ಟಿದೆ‌- ಕೇಂದ್ರದ ವಿರುದ್ದ ಎಂ.ಲಕ್ಷ್ಮಣ್ ಕಿಡಿ

04:09 PM Jul 24, 2024 IST | prashanth

ಮೈಸೂರು,ಜುಲೈ,24,2024 (www.justkannada.in): ಮೋದಿ ನೇತೃತ್ವದ 3.0 ಸರ್ಕಾರ ಬಜೆಟ್ ಮಂಡನೆ ಮಾಡಿದೆ. ಆದರೆ ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು ಕೊಟ್ಟು ನಾಮ ಇಟ್ಟಿದೆ‌ ಎಂದು ಕೇಂದ್ರ ಸರ್ಕಾರದ ವಿರುದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದರು.

ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಖಾಲಿ ಚೊಂಬು, ಖಾಲಿ ಚಿಪ್ಪು ಪ್ರದರ್ಶನ ಮಾಡಿ ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಕ್ಕೆ ಕೇಂದ್ರ ಸರ್ಕಾರ ಯಾವುದೇ ಯೋಜನೆ ನೀಡಿಲ್ಲ. ಕರ್ನಾಟಕದ ಜನತೆಗೆ ಖಾಲಿ ಚೊಂಬು, ಖಾಲಿ ಚಿಪ್ಪು ನೀಡಿದ್ದಾರೆ. ನಿರ್ಮಲಾ ಸೀತಾರಾಮನ್ ನೀರು ಕುಡಿಯದೇ ಬಜೆಟ್ ಮಂಡನೆ ಮಾಡಿದ್ದಾರೆ. ಕರ್ನಾಟಕಕ್ಕೆ ಬಜೆಟ್ ನಲ್ಲಿ ಏನೂ ಸಿಕ್ಕಿಲ್ಲ. ಈ ಬಗ್ಗೆ ಸಿಎಂ, ಡಿಸಿಎಂ ವಿಧಾನಸಭೆಯಲ್ಲಿ ಮಾತನಾಡಿದ್ದಾರೆ. ಜೆಡಿಎಸ್, ಬಿಜೆಪಿಯಿಂದ 19 ಎಂಪಿಗಳನ್ನು ಆಯ್ಕೆ ಮಾಡಿ ಕಳುಹಿಸಿದ್ದಾರೆ. ಆದರೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ, ಅಲ್ಲದೇ ನಾಮ ಇಟ್ಟಿದೆ‌. ಮೋದಿ ಅಧಿಕಾರಕ್ಕೆ ಬಂದಾಗಿನಿಂದ 183 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಮನಮೋಹನ್ ಸಿಂಗ್ ಅವಧಿಯವರೆಗೂ 53 ಲಕ್ಷ ಕೋಟಿ ಸಾಲ ಮಾಡಿತ್ತು ಎಂದು ತಿಳಿಸಿದರು.

Key words: M. Laxman, central budget, state, injustice

Tags :
Central BudgetInjusticeM LaxmanState
Next Article