HomeBreaking NewsLatest NewsPoliticsSportsCrimeCinema

ಕಾಂಗ್ರೆಸ್ ಗೆ ಮಾಜಿ ಸಿಎಂ ಅಶೋಕ್ ಚೌಹಾಣ್ ರಾಜೀನಾಮೆ.

03:22 PM Feb 12, 2024 IST | prashanth

ಮುಂಬೈ, ಫೆಬ್ರವರಿ,12,2024(www.justkannada.in): ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚೌಹಾಣ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಶೋಕ್ ಚವಾಣ್ ಅವರು ಇಂದು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.  12/02/2024 ರ ಮಧ್ಯಾಹ್ನದಿಂದ ಜಾರಿಗೆ ಬರುವಂತೆ ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ” ಎಂದು ಚವಾಣ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿದೆ.  ಇನ್ನು ಅಶೋಕ್ ಚೌಹಾಣ್ ಬಿಜೆಪಿ ಸೇರುವ ಸಾಧ್ಯತೆ ಇದೆ.

Key words: Maharastra-Former CM -Ashok Chauhan-resigns - Congress.

Tags :
Maharastra-Former CM -Ashok Chauhan-resigns - Congress.
Next Article