For the best experience, open
https://m.justkannada.in
on your mobile browser.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ- ಮಾಜಿ ಸಿಎಂ ಬೊಮ್ಮಾಯಿ.

11:49 AM May 17, 2024 IST | prashanth
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಆಗಲ್ಲ ಅಂದ್ರೆ ಜಾಗ ಖಾಲಿ ಮಾಡಿ  ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ, ಮೇ, 17,2024 (www.justkannada.in):  ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿಅಂಜಲಿ ಕೊಲೆ ಆಘಾತಕಾರಿ ಬೆಳವಣಿಗೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು  ಆಗಲ್ಲ ಎಂದರೇ ಜಾಗ ಖಾಲಿ ಮಾಡಿ ಎಂದು ಸಿಎಂ ಸಿದ್ದರಾಮಯ್ಯಗೆ  ಮಾಜಿ ಸಿಎಂ ಬಸವರಾಜ ಬೊಮ್ಮಾಯಿ  ಚಾಟಿ ಬೀಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ವೀರಾಪುರ  ಓಣಿಯಲ್ಲಿನ ಕೊಲೆಯಾದ ಅಂಜಲಿ ನಿವಾಸಕ್ಕೆ ಅವರು ಭೇಟಿ ನೀಡಿದರು. ನಂತರ ಮಾತನಾಡಿದ ಅವರು, ಆರೋಪಿಗಳಿಗೆ ಕಾನೂನಿನ ಭಯವು ಇಲ್ಲ ಪೊಲೀಸರ ಭಯವೂ ಇಲ್ಲದಂತಾಗಿದ್ದು, ಏನು ಮಾಡಿದರೂ ನಡೆಯುತ್ತೆ ಎನ್ನುವ ಭಾವನೆ ಮೂಡಿದೆ. ನೇಹಾ ಪ್ರಕರಣ ನಡೆದ ನಂತರವೂ ಪೊಲೀಸರು ಎಚ್ಚೆತ್ತುಕೊಂಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಇತರ ನಾಯಕರು ದೊಡ್ಡ ದೊಡ್ಡ ಮಾತುಗಳನ್ನಾಡಿದರು. ಏನೂ ಮಾಡದೆ ಇರುವ ಪರಿಣಾಮ ಈ ಹತ್ಯೆ ನಡೆದಿದೆ ಎಂದು ಆರೋಪಿಸಿದರು.

ಆರೋಪಿ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದರೆ ಈ ಪರಿಸ್ಥಿತಿ ಉಂಟಾಗುತ್ತಿರಲಿಲ್ಲ. ನೀವು ರಾಜಕಾರಣವನ್ನಾದರೂ ಅನ್ನಿ ಮಹಾರಾಜಕಾರಣವನ್ನಾದ್ರೂ ಅನ್ನಿ. ನಿಮ್ಮ ಕೈಯಲ್ಲಿ ಕಾನೂನು ಕಾಪಾಡಲು ಆಗೋಲ್ಲ ಅಂದ್ರೆ ಕೂಡಲೇ ಜಾಗ ಖಾಲಿ ಮಾಡಿ ಎಂದು ಆಗ್ರಹಿಸಿದರು.

Key words: maintain, law and order, Bommai

Tags :

.