For the best experience, open
https://m.justkannada.in
on your mobile browser.

ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯ

05:16 PM Aug 16, 2024 IST | prashanth
ಸರ್ಕಾರಿ ನೌಕರರು ಕೆಂಪು ಹಳದಿ ಬಣ್ಣದ ಗುರುತಿನ ಚೀಟಿ ಟ್ಯಾಗ್ ಹಾಕಿಕೊಳ್ಳುವುದು ಕಡ್ಡಾಯ

ಬೆಂಗಳೂರು,ಆಗಸ್ಟ್,16,2024 (www.justkannada.in):  ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ" ಅಭಿಯಾನದಡಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯ ಕೊರಳುದಾರವನ್ನು (ಟ್ಯಾಗ್) ಹಾಕಿಕೊಳ್ಳುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಸುತ್ತೋಲೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ ಅವರು, ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ" ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ ಎಂದು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ ಸಿಬ್ಬಂದಿಗಳು ತಮ್ಮ ಇಲಾಖೆ/ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸುವಂತೆ ಸೂಚನೆ ನೀಡಿದ್ದಾರೆ.

ನೂತನ ಕೊರಳುದಾರದ ವಿನ್ಯಾಸವನ್ನು https://photos.app.goo.gl/YcJeNHnDNPecW8Q48 ನ ಆನ್‌ಲೈನ್ ವಿಳಾಸದಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು  ಆದೇಶದಲ್ಲಿ ಸಂದೀಪ್ ಬಿ.ಕೆ ಅವರು ತಿಳಿಸಿದ್ದಾರೆ.

Key words: mandatory, government employees, red-yellow, identity card, tag

Tags :

.