For the best experience, open
https://m.justkannada.in
on your mobile browser.

ವಾಣಿಜ್ಯ ಮಳಿಗೆಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ.

11:41 AM Dec 26, 2023 IST | prashanth
ವಾಣಿಜ್ಯ ಮಳಿಗೆಗಳಲ್ಲಿ ಶೇ 60ರಷ್ಟು ಕನ್ನಡ ಬಳಕೆ ಕಡ್ಡಾಯ

ಬೆಂಗಳೂರು,ಡಿಸೆಂಬರ್,26,2023(www.justkannda.in):  ಬೆಂಗಳೂರಿನ ವಾಣಿಜ್ಯ ಮಳಿಗೆಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ವಾಣಿಜ್ಯ ಮಳಿಗೆಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿದ್ದು,  ಕನ್ನಡ ನಾಮಫಲಕ ಅವಳಡಿಕೆಗೆ ಫೆಬ್ರವರಿ 28 ಕೊನೇ ದಿನವಾಗಿದೆ.

ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು "ಕನ್ನಡಿಗ"ರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ.

ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ. ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ "ಹೆಮ್ಮೆಯ ಕನ್ನಡಿಗ"ರಾಗಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ನಿಯಮ ಉಲ್ಲಂಘಿಸಿದರೆ ಕಟ್ಟು ನಿಟ್ಟಿನ ಕ್ರಮ ನಿಶ್ಚಿತ ಎಂದು ಟ್ವಿಟ್ ಮೂಲಕ  ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

Key words: mandatory - use 60% Kannada -commercial stores-CM Siddaramaiah

Tags :

.